ರಾಜಾ ಭಯ್ಯಾ ವಿರುದ್ಧ ಕೊಲೆ ಆರೋಪ ದಾಖಲಿಸಿದ ಸಿಬಿಐ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಕೊಲೆಯ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ಮಾಜಿ ಸಚಿವ ರಘುರಾಜ್ ಪ್ರತಾಪ್ ಸಿಂಗ್ (ರಾಜಾ ಭಯ್ಯಾ)...
ಲಖನೌ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಕೊಲೆಯ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ಮಾಜಿ ಸಚಿವ ರಘುರಾಜ್ ಪ್ರತಾಪ್ ಸಿಂಗ್ (ರಾಜಾ ಭಯ್ಯಾ) ಅವರ ವಿರುದ್ದ ಸಿಬಿಐ ಗುರುವಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ.
ತನ್ನ ಪತಿ ಜಿಯಾ ಉಲ್ ಹಖ್ ಅವರ ಕೊಲೆಯಲ್ಲಿ ರಾಜಾ ಭಯ್ಯಾ ಅವರು ಶಾಮೀಲಾಗಿದ್ದಾರೆ ಎಂದು ಆರೋಪಿಸಿ ಹಖ್ ಅವರ ಪತ್ನಿ ಪರವೀನ್ ಆಝಾದ್ ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ರಾಜಾ ಭಯ್ಯಾ ಅವರ ಮೇಲೆ ಸಿಬಿಐ ಕೊಲೆ ಆರೋಪ ಪಟ್ಟಿ ದಾಖಲಿಸಿದೆ.
ಕುಂದಾ ಕ್ಷೇತ್ರದಿಂದ ಸ್ವತಂತ್ರ ಶಾಸಕರಾಗಿ ಆಯ್ಕೆಯಾಗಿರುವ ರಾಜಾ ಭಯ್ಯಾ ಅವರು ತನ್ನ ಪತಿ ಕೊಲೆಗೆ ಪಿತೂರಿ ನಡೆಸಿದ್ದಾರೆ ಎಂದು ಪರವಿನ್ ದೂರು ನೀಡಿದ ಹಿನ್ನೆಲೆಯಲ್ಲಿ ಕಳೆದ ಭಾನುವಾರ ಲಖನೌ ಪೊಲೀಸರು ರಾಜಾ ಭಯ್ಯಾ ಅವರ ಮೇಲೆ ಕೊಲೆ ಆರೋಪ ಹೊರಿಸಿದ್ದರು.
ಮೂಲಗಳ ಪ್ರಕಾರ ಸದ್ಯ ಈ ಪ್ರಕರಣ ಭಾರತೀಯ ದಂಡ ಸಂಹಿತೆ (ಐಪಿಸಿ) 302ರ ಅಡಿಯಲ್ಲಿ ಕೊಲೆ ಪ್ರಕರಣವಾಗಿ ಮಾರ್ಪಟ್ಟಿದ್ದು, ಸಿಬಿಐ ಅಧಿಕಾರಿ ರಾಜಾ ಭಯ್ಯಾ ಅವರನ್ನು ಬಂಧಿಸಬಹುದಾಗಿದೆ. ಆದರೆ ಪ್ರಕರಣದ ಪೂರ್ಣ ತನಿಖೆ ನಂತರ ಸಿಬಿಐ ಅಧಿಕಾರಿಗಳು ರಾಜಾ ಅವರನ್ನು ಬಂಧಿಸಿ, ವಿಚಾರಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣದಲ್ಲಿ ರೋಹಿತ್ ಸಿಂಗ್, ಗುಡ್ಡು ಸಿಂಗ್, ಓಂ ಶ್ರೀವಾತ್ಸವ್ ಮತ್ತು ಗುಲ್ಶನ್ ಯಾದವ್ ಅವರು ಭಾಗಿಯಾಗಿದ್ದಾರೆ ಎಂದು ಆರೋಪ ಪಟ್ಟಿ ಸಲ್ಲಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.