ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಆರ್ಥಿಕ ಸುಧಾರಣಾ ನಿಯಮಗಳಲ್ಲಿ ಬದಲಾವಣೆ ಇಲ್ಲ: ಪ್ರಧಾನಿ

ಯುಪಿಎ ಸರ್ಕಾರದ ನೀತಿಗಳನ್ನು ಶುಕ್ರವಾರ ಸಮರ್ಥಿಸಿಕೊಂಡಿರುವ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರು, ಆರ್ಥಿಕ ..

Lingaraj Badiger
Updated On : 8 Mar 2013, 1:55 am

ನವದೆಹಲಿ: ಯುಪಿಎ ಸರ್ಕಾರದ ನೀತಿಗಳನ್ನು ಶುಕ್ರವಾರ ಸಮರ್ಥಿಸಿಕೊಂಡಿರುವ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರು, ಆರ್ಥಿಕ ಸುಧಾರಣಾ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಪ್ರಧಾನಿ ಸಿಂಗ್, ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿ ದರ ಏರಿಕೆಯಾಗಿದೆ. ಮುಂದಿನ 2-3 ವರ್ಷಗಳಲ್ಲಿ ಶೇ. 9ರಷ್ಟು ಆರ್ಥಿಕ ಅಭಿವೃದ್ಧಿಯನ್ನು ಸಾಧಿಸುವ ನಿರೀಕ್ಷೆ ಇದೆ ಎಂದು ಹೇಳಿದರು.

ಕೃಷಿಯಲ್ಲಿ ಅಭೂತಪೂರ್ವ ಸಾಧನೆ ಮಾಡಲಾಗಿದೆ ಮತ್ತು ಕೈಗಾರಿಕಾ ಅಭಿವೃದ್ಧಿಗೆ ಪೂರಕ ವ್ಯವಸ್ಥೆ ಕಲ್ಪಿಸಲಾಗಿದೆ. ಬಡತನ ನಿರುದ್ಯೋಗ ನಿವಾರಣೆಯ ಅಗತ್ಯವಿದೆ ಎಂದು ಸಿಂಗ್ ತಿಳಿಸಿದರು. ಇದೇ ವೇಳೆ ಶ್ರೀಲಂಕಾದಲ್ಲಿ ತಮಿಳರ ರಕ್ಷಣೆಗೆ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement