ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರೆಡ್ಡಿ-ರಾಮುಲು ಭೇಟಿಗೆ ನಿರಾಕರಣೆ

ವಿಚಾರಣೆಗಾಗಿ ಬೆಂಗಳೂರಿಗೆ ಬಂದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯನ್ನು ಭೇಟಿ ಮಾಡಲು ಅವರ ಆಪ್ತ ಸ್ನೇಹಿತ...

Lingaraj Badiger
Updated On : 8 Mar 2013, 12:36 pm

ಬೆಂಗಳೂರು: ವಿಚಾರಣೆಗಾಗಿ ಬೆಂಗಳೂರಿಗೆ ಬಂದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯನ್ನು ಭೇಟಿ ಮಾಡಲು ಅವರ ಆಪ್ತ ಸ್ನೇಹಿತ ಹಾಗೂ ಬಿಎಸ್‌ಆರ್ ಕಾಂಗ್ರೆಸ್ ಸಂಸ್ಥಾಪಕ ಬಿ.ಶ್ರೀರಾಮುಲು ಅವರು ಶುಕ್ರವಾರ ಪರಪ್ಪನ ಅಗ್ರಹಾರಕ್ಕೆ ತೆರಳಿದ್ದಾರೆ. ಆದರೆ ರೆಡ್ಡಿ ಭೇಟಿಗೆ ಅಧಿಕಾರಿಗಳು ನಿರಾಕರಿಸಿದ್ದಾರೆ.

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ವಿಚಾರಣೆಗಾಗಿ ಇಂದು ಬೆಳಗ್ಗೆ ರೆಡ್ಡಿಯನ್ನು ಬೆಂಗಳೂರಿಗೆ ಕರೆತರಲಾಗಿತ್ತು. ರೆಡ್ಡಿಯನ್ನು ಭೇಟಿ ಮಾಡಲು ಶ್ರೀರಾಮುಲು ಜತೆ ಸಂಸದೆ ಜೆ.ಶಾಂತಾ ಹಾಗೂ ಸಂಸದ ಸಣ್ಣಫಕೀರಪ್ಪ, ರೆಡ್ಡಿ ಪತ್ನಿ ಅರುಣ, ಮಕ್ಕಳಾದ ಕಿರೀಟ ಹಾಗೂ ಬ್ರಹ್ಮಿಣಿ ಪರಪ್ಪನ ಅಗ್ರಹಾರಕ್ಕೆ ಆಗಮಿಸಿದ್ದಾರೆ. ಆದರೆ ಜೈಲು ಅಧಿಕಾರಿಗಳು ಅವರ ಸಮಾಗಮಕ್ಕೆ ಅವಕಾಶ ನೀಡಿಲ್ಲ ಎಂದು ತಿಳಿದು ಬಂದಿದೆ.

ರಾಮುಲು ಅವರೊಂದಿಗೆ ರೆಡ್ಡಿ ಭೇಟಿ ಮಾಡಲು ಬಿಎಸ್‌ಆರ್ ಕಾಂಗ್ರೆಸ್ ನಾಯಕ ಮದನ್ ಪಟೇಲ್ ಹಾಗೂ ನಾಲ್ವರು ವಕೀಲರು ಸಹ ಆಗಮಿಸಿದ್ದರು ಎನ್ನಲಾಗಿದೆ.

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಸಿಬಿಐ ವಿಶೇಷ ನ್ಯಾಯಾಲಯದ ಆದೇಶದಂತೆ ರೆಡ್ಡಿ ಹಾಗೂ ಅವರ ಆಪ್ತ ಅಲಿ ಖಾನ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿನ ಎದುರಿಗಿರುವ ಸಿಬಿಐ ವಿಶೇಷ ಕೋರ್ಟ್‌ನಲ್ಲಿ ವಿಚಾರಣೆಗೆ ಹಾಜರುಪಡಿಸಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement