ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಡಿವಿಎಸ್, ಅಶೋಕ್ ರಾಜ್ಯಾಧ್ಯಕ್ಷರಾಗುವ ಸಾಧ್ಯತೆ

ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದಗೌಡ ಅಥವಾ ಉಪ ಮುಖ್ಯಮಂತ್ರಿ ಆರ್.ಅಶೋಕ್ ..

ಆರ್.ಅಶೋಕ್, ಡಿ.ವಿ.ಸದಾನಂದಗೌಡ
Lingaraj Badiger
Updated On : 9 Mar 2013, 4:02 am

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದಗೌಡ ಅಥವಾ ಉಪ ಮುಖ್ಯಮಂತ್ರಿ ಆರ್.ಅಶೋಕ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯನ್ನು ಅಲಂಕರಿಸುವ ಸಾಧ್ಯತೆ ಇದೆ.

ನೂತನ ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆ ಸಂಬಂಧ ಇಂದು ನಗರದ ತಾಜ್ ವೆಸ್ಟೆಂಡ್ ಹೋಟೆಲ್‌ನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ ಅಂತ್ಯವಾಗಿದ್ದು, ಸಭೆಯಲ್ಲಿ ಭಾಗವಹಿಸಿದ್ದ ಬಿಜೆಪಿಯ ಹಿರಿಯ ನಾಯಕ ಅರುಣ್ ಜೇಟ್ಲಿ ಹಾಗೂ ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರು ವಾಪಸ್ ದೆಹಲಿಗೆ ತೆರಳಿದ್ದಾರೆ.

ಸಭೆಯಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷರ ಆಯ್ಕೆ ಕುರಿತು ರಾಜ್ಯದ ಮುಖಂಡರೊಂದಿಗೆ ಜೇಟ್ಲಿ ಹಾಗೂ ಧರ್ಮೇಂದ್ರ ಪ್ರಧಾನ್ ಚರ್ಚೆ ನಡೆಸಿದರು. ಈ ವೇಳೆ ಮಾಜಿ ಸಿಎಂ ಡಿವಿಎಸ್ ಅವರ ಬಗ್ಗೆ ಹೆಚ್ಚು ಒಲವು ತೋರಿಸಲಾಗಿದೆ. ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಇರುವುದರಿಂದ ಅನುಭವಿಗಳು ರಾಜ್ಯಾಧ್ಯಕ್ಷರಾದರೆ ಉತ್ತಮ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಇನ್ನು ಆರ್.ಅಶೋಕ್ ಅವರು ಒಕ್ಕಲಿಗ ಹಾಗೂ ಉಪ ಮುಖ್ಯಮಂತ್ರಿಯಾಗಿ, ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಅಲ್ಲದೆ ಪ್ರಭಾವಿ ನಾಯಕರೂ ಅವರ ಬೆನ್ನಿಗಿರುವುದರಿಂದ ಸಭೆಯಲ್ಲಿ ಕೆಲವು ನಾಯಕರು ಅಶೋಕ್ ಆಯ್ಕೆ ಬಗ್ಗೆ ಆಸಕ್ತಿ ತೋರಿಸಿದ್ದಾರೆ. ಹೀಗಾಗಿ ಡಿವಿಎಸ್ ಹಾಗೂ ಅಶೋಕ್ ಮಾತ್ರ ಈಗ ರಾಜ್ಯಾಧ್ಯಕ್ಷ ಹುದ್ದೆಯ ರೇಸ್‌ನಲ್ಲಿದ್ದು, ಸಹಮತ ಮೂಡಿದಲ್ಲಿ ಇಬ್ಬರಲ್ಲಿ ಒಬ್ಬರು ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement