768 ಪಕ್ಷೇತರರ ಗೆಲವು, ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ಗಂಟೆ: ಸಿಎಂ ಶೆಟ್ಟರ್
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 768 ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ಗಂಟೆ..
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 768 ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ಗಂಟೆಯಾಗಲಿದೆ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಸೋಮವಾರ ಹೇಳಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಶೆಟ್ಟರ್, ಈ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.
ಇನ್ನು ಇದೊಂದು ಆಘಾತಕಾರಿ ಫಲಿತಾಂಶ, ಇದನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು, ನಮಗೆ ಮೊದಲ ಸ್ಥಾನ ಬರುವ ವಿಶ್ವಾಸವಿತ್ತು. ಆದರೆ ಜನರು ನಮಗೆ ಪಾಠ ಕಲಿಸಿದ್ದಾರೆ. ಪಕ್ಷದ ಆಂತರಿಕ ಕಲಹಕ್ಕೆ ತಕ್ಕ ಉತ್ತರ ಸಿಕ್ಕಿದೆ. ಜನಾದೇಶಕ್ಕೆ ತಲೆ ಬಾಗುತ್ತೇವೆ. ತಪ್ಪು ತಿದ್ದಿಕೊಂಡು ಮುಂದೆ ಹೋಗುತ್ತೇವೆ ಎಂದಿದ್ದಾರೆ.