ಆಂತರಿಕ ಕಚ್ಚಾಟದಿಂದ ಬಿಜೆಪಿಗೆ ಸೋಲು: ಡಿ.ವಿ.ಸದಾನಂದಗೌಡ
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಭಾರಿ ಮುಖಭಂಗ ಅನುಭವಿಸಿರುವ ಹಿನ್ನೆಲೆಯಲ್ಲಿ ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ...
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಭಾರಿ ಮುಖಭಂಗ ಅನುಭವಿಸಿರುವ ಹಿನ್ನೆಲೆಯಲ್ಲಿ ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಂತ ಆಂತರಿಕ ಕಚ್ಚಾಟಕ್ಕೆ ಬೇಸತ್ತು ಜನ ಮತ ಹಾಕಿಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿವಿಎಸ್, ನಮ್ಮ ಪಕ್ಷದ ಪ್ರಮುಖ ನಾಯಕರ ವಾರ್ಡ್ಗಳಲ್ಲೆ ಬಿಜೆಪಿ ಸೋಲು ಅನುಭವಿಸಿರುವುದು ಆಘಾತ ತಂದಿದೆ. ಇದಕ್ಕೆಲ್ಲ ನಾಯಕರ ಆಂತರಿಕ ಕಚ್ಚಾಟವೇ ಪ್ರಮುಖ ಕಾರಣ ಎಂದು ತಿಳಿಸಿದರು.
ಬಿಜೆಪಿಯ ಆಂತರಿಕ ಕಚ್ಚಾಟದ ಲಾಭ ಪಡೆದು ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಚುನಾವಣೆಯಲ್ಲಿ ಮುನ್ನಡೆ ಸಾಧಿಸಿವೆ ಹೊರತು ಅವುಗಳ ಶಕ್ತಿ ಸಾಮರ್ಥ್ಯದಿಂದ ಅಲ್ಲ. ಮುಂದಿನ ವಿಧಾನಸಭಾ ಚುನಾವಣೆ ಮೇಲೆ ಸ್ಥಳೀಯ ಚುನಾವಣೆ ಫಲಿತಾಂಶ ಯಾವುದೇ ಪ್ರಭಾವ ಬೀರುವುದಿಲ್ಲ ಎಂದು ಡಿವಿಎಸ್ ಹೇಳಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.