ಆತ್ಮಹತ್ಯೆಗೆ ಭದ್ರತಾ ಲೋಪವೇ ಕಾರಣ: ಶಿಂಧೆ
ನವದೆಹಲಿ: ತಿಹಾರ್ ಜೈಲಿನ ಭದ್ರತಾ ಲೋಪವೇ ದೆಹಲಿ ಗ್ಯಾಂಗ್ರೇಪ್ ಆರೋಪಿ ರಾಮ್ಸಿಂಗ್ ಆತ್ಮಹತ್ಯೆಗೆ ಕಾರಣ ಎಂದು ಕೇಂದ್ರ ಗೃಹ ಸಚಿವ ಸುಶೀಲ್ಕುಮಾರ್ ಶಿಂಧೆ ಸೋಮವಾರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಿಂಧೆ, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಘಟನೆಯಲ್ಲಿ ಅಧಿಕಾರಿಗಳ ಭದ್ರತಾ ಲೋಪ ಸ್ಪಷ್ಟವಾಗಿ ಎದ್ದು ಕಾಣುತ್ತಿದೆ ಎಂದು ಹೇಳಿದರು.
ಈ ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ಸದ್ಯಕ್ಕೆ ಈಗಲೇ ಯಾವುದೇ ತೀರ್ಮಾನಕ್ಕೆ ಬರಲಾಗುವುದಿಲ್ಲ ಎಂದು ಅವರು ತಿಳಿಸಿದರು. ಪ್ರಕರಣದ ಸತ್ಯಾಸತ್ಯಗಳು ನ್ಯಾಯಾಂಗ ತನಿಖೆಯಲ್ಲಿ ಹೊರಬಿಳಲಿದ್ದು, ಅಲ್ಲಿವರೆಗೆ ಕಾದುನೋಡಿ ಎಂದು ಶಿಂಧೆ ತಿಳಿಸಿದರು.
ಡಿಸೆಂಬರ್ 16ರಂದು ದೆಹಲಿಯ ಚಲಿಸುವ ಬಸ್ನಲ್ಲಿ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ರಾಮ್ಸಿಂಗ್ ಪ್ರಮುಖ ಆರೋಪಿಯಾಗಿದ್ದು, ಇತನನ್ನು ಪೊಲೀಸರು ಬಂಧಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.