ತಪ್ಪು ಸಾಬೀತಾದರೆ ವಿಜೇಂದ್ರ ಮೇಲೆ ಕ್ರಮ: ಕ್ರೀಡಾ ಸಚಿವ
ನವದೆಹಲಿ: ತನಿಖೆಯಲ್ಲಿ ಬುಹುಕೋಟಿ ಮೌಲ್ಯದ ಹೆರಾಯಿನ್ ಅಕ್ರಮವಾಗಿ ಸಾಗಣೆ ಮಾಡಿರುವುದು ಸಾಬೀತಾದರೆ ಒಲಿಂಪಿಕ್ ಕಂಚಿನ ಪದಕ ವಿಜೇತ ವೀರೇಂದ್ರ ಸಿಂಗ್ ಅವರ ಮೇಲೆ ಸರಿಯಾದ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವ ಜೀತೆಂದ್ರ ಸಿಂಗ್ ಸೋಮವಾರ ಹೇಳಿದ್ದಾರೆ.
ಪ್ರಕರಣದ ತನಿಖೆಯನ್ನು ಪಂಜಾಬ್ ಪೊಲೀಸ್ರು ನಡೆಸುತ್ತಿದ್ದು, ತನಿಖೆ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜೀತೆಂದ್ರ ಸಿಂಗ್ ತಿಳಿಸಿದ್ದಾರೆ. ತಪ್ಪಿತಸ್ಥರು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಸಿಂಗ್ ಹೇಳಿದರು.
ಈಗಾಗಲೇ ರಾಷ್ಟ್ರೀಯ ಕ್ರೀಡಾ ಸಂಸ್ಥೆಯಿಂದ ರಾಮ್ಸಿಂಗ್ ಅವರನ್ನು ಸದಸ್ಯತ್ವದಿಂದ ಕಿತ್ತುಹಾಕಲಾಗಿದೆ. ನಾನು ವಿಜೇಯೆಂದ್ರ ಸೇರಿ ಹೆರಾಯಿನ್ ಸಾಗಿಸುತ್ತಿದ್ದೆವು ಎಂದು ರಾಮ್ಸಿಂಗ್ ತಪ್ಪೊಪ್ಪಿಕೊಂಡಿದ್ದ. ಆದರೆ ವಿಜೇಂದ್ರ ಸಿಂಗ್ ಈ ಪ್ರಕರಣದಲ್ಲಿ ನಾನು ಭಾಗಿಯಾಗಿಲ್ಲ, ನನ್ನ ಮೇಲಿನ ಆರೋಪಗಳು ಸುಳ್ಳು ಎಂದು ನೀರಾಕರಿಸಿದ್ದರು.
ಫತೇಘರ್ ಸಾಹಿಬ್ ಎನ್ಆರ್ಐ ಘ್ಲಾಟ್ ಬಳಿ ಸುಮಾರು ರು. 130 ಕೋಟಿ ಮೌಲ್ಯದ ಹೆರಾಯಿನ್ ವಿಜೇಂದ್ರ ಪತ್ನಿ ಅವರ ಕಾರಿನಲ್ಲಿ ಪೊಲೀಸರು ದಾಳಿ ಮಾಡಿದಾಗ ಪತ್ತೆಯಾಗಿತ್ತು. ಈ ಪ್ರಕರಣದಲ್ಲಿ ವಿಜೇಂದ್ರ ಭಾಗಿಯಾಗಿದ್ದಾರೆ ಎಂದು ಪೊಲೀಸರಲ್ಲಿ ಬಲವಾದ ಶಂಕೆ ವ್ಯಕ್ತವಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.