ಬಳ್ಳಾರಿ ಪಾಲಿಕೆ ಕೈ ಪಾಲು, ಬಿಎಸ್ಆರ್ಗೆ ಮುಖಭಂಗ
ಕಳೆದ 5 ವರ್ಷಗಳಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ತನ್ನ ಅಸ್ತಿತ್ವವನ್ನೆ ಕಳೆದುಕೊಂಡಿದ್ದ ಕಾಂಗ್ರೆಸ್ ಇದೀಗ ಮತ್ತೆ ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ..
ಬಳ್ಳಾರಿ: ಕಳೆದ 5 ವರ್ಷಗಳಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ತನ್ನ ಅಸ್ತಿತ್ವವನ್ನೆ ಕಳೆದುಕೊಂಡಿದ್ದ ಕಾಂಗ್ರೆಸ್ ಇದೀಗ ಮತ್ತೆ ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಅಧಿಕಾರ ಪಡೆದುಕೊಂಡಿದೆ.
ಕಳೆದ ಗುರುವಾರ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಮಾಜಿ ಸಚಿವ ಹಾಗೂ ಬಿಎಸ್ಆರ್ ಕಾಂಗ್ರೆಸ್ ಸಂಸ್ಥಾಪಕ ಶ್ರೀರಾಮುಲು ಅವರಿಗೆ ತವರು ಜಿಲ್ಲೆಯಲ್ಲೇ ಭಾರಿ ಮುಖಭಂಗವಾಗಿದೆ.
ಬಳ್ಳಾರಿ ಮಹಾನಗರ ಪಾಲಿಕೆ ಒಟ್ಟು 60 ಸ್ಥಾನಗಳನ್ನು ಹೊಂದಿದ್ದು, ಅದರಲ್ಲಿ ಕಾಂಗ್ರೆಸ್ 24 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಭರ್ಜರಿ ಜಯ ಸಾಧಿಸಿದೆ. ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಮಂಗಳಮುಖಿ ಪರ್ವಿನ್ ಅವರು ಸಹ ಗೆಲುವು ಸಾಧಿಸಿದ್ದಾರೆ.