ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಡ್ರಗ್ಸ್ ಪತ್ತೆ: ವಿಜೇಂದರ್ ಪಾತ್ರದ ಕುರಿತು ಸಾಕ್ಷ್ಯಾಧಾರ

ಡ್ರಗ್ಸ್ ಪತ್ತೆ ಪ್ರಕರಣದಲ್ಲಿ ಬಾಕ್ಸರ್ ವಿಜೇಂದರ್ ಸಿಂಗ್ ಪಾತ್ರವಿರುವ ಕುರಿತು ಸಾಕ್ಷ್ಯಾಧಾರಗಳು ಸಿಕ್ಕಿವೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

Srinivasa Murthy VN
Updated On : 12 Mar 2013, 6:19 am

ಮೊಹಾಲಿ: ಡ್ರಗ್ಸ್ ಪತ್ತೆ ಪ್ರಕರಣದಲ್ಲಿ ಬಾಕ್ಸರ್ ವಿಜೇಂದರ್ ಸಿಂಗ್ ಪಾತ್ರವಿರುವ ಕುರಿತು ಸಾಕ್ಷ್ಯಾಧಾರಗಳು ಸಿಕ್ಕಿವೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

ಮೊಹಾಲಿಯ ಜೀರಕ್‌ಪುರದ ಅಪಾರ್ಟ್ ಮೆಂಟ್‌ನಲ್ಲಿ ಪತ್ತೆಯಾದ ಅಪಾರ ಪ್ರಮಾಣದ ಹೆರಾಯಿನ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೊಹಾಲಿ ಪೊಲೀಸರು ಇಬ್ಬರು ಬಾಕ್ಸರ್ ಗಳಾದ ವಿಜೇಂದರ್ ಸಿಂಗ್ ಮತ್ತು ರಾಮ್ ಸಿಂಗ್ ಅವರ ಪಾತ್ರವಿರುವ ಕುರಿತು ಹಲವು ಸಾಕ್ಷ್ಯಾಧಾರಗಳನ್ನು ತಾವು ಕಲೆಹಾಕಿರುವುದಾಗಿ ತಿಳಿಸಿದ್ದಾರೆ.

ಆದರೆ ಪಂಜಾಬ್ ಪೊಲೀಸರ ಹೇಳಿಕೆಯನ್ನು ತಳ್ಳಿ ಹಾಕಿರುವ ಬಾಕ್ಸರ್ ವಿಜೇಂದರ್ ಸಿಂಗ್ ಅವರು, ತಾವು ಯಾವುದೇ ರೀತಿಯ ಉದ್ದೀಪನ ಮದ್ದು ಸೇವಿಸಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಪ್ರಕರಣದ ತನಿಖೆಗಾಗಿ ಪಂಜಾಬ್ ಪೊಲೀಸರು ಕೇಳಿದ್ದ ಕೂದಲು ಮತ್ತು ರಕ್ತದ ಮಾದರಿಯ ಪರೀಕ್ಷೆಗೆ ವಿಜೇಂದರ್ ಸಿಂಗ್ ನಕಾರ ವ್ಯಕ್ತಪಡಿಸಿದ್ದಾರೆ.

"ತಮಗೆ ಮೊಹಾಲಿ ಪೊಲೀಸರ ಮೇಲೆ ಭರವಸೆ ಇಲ್ಲ. ಹೀಗಾಗಿ ನನ್ನ ಕೂದಲು ಮತ್ತು ರಕ್ತದ ಮಾದರಿಯನ್ನು ಅವರಿಗೆ ಪರೀಕ್ಷೆಗಾಗಿ ನೀಡುವುದಿಲ್ಲ. ರಾಷ್ಟ್ರೀಯ ಮಟ್ಟದ ಉದ್ದೀಪನ ಮದ್ದು ತಡೆ ಸಂಸ್ಥೆ (ನಾಡಾ) ಅಥವಾ ಅಂತಾರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ (ವಾಡಾ)ದ ಮುಂದೆ ತಾವು ಪರೀಕ್ಷೆಗೆ ಸಿದ್ದ ಎಂದು ವಿಜೇಂದರ್ ತಿಳಿಸಿದ್ದಾರೆ.

ಒಟ್ಟಾರೆ ಅಪಾರ ಪ್ರಮಾಣದ ಮಾದಕ ವಸ್ತು ಪತ್ತೆ ಪ್ರಕರಣ ಒಲಿಂಪಿಕ್ಸ್ ಪದಕ ವಿಜೇತ ಬಾಕ್ಸರ್ ವಿಜೇಂದರ್ ಸಿಂಗ್ ಅವರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಪ್ರಕರಣದಿಂದಾಗಿ ಅವರ ಭವಿಷ್ಯವೇ ಮಸುಕಾಗಿದ್ದು, ತನಿಖೆಯ ನಂತರ ಅವರ ಭವಿಷ್ಯ ನಿರ್ಧಾರವಾಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement