ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಾನಿಲ್ಲದ ಬಿಜೆಪಿ ಸ್ಥಿತಿ ದಯನೀಯ: ಬಿಎಸ್‌ವೈ

ನಿನ್ನೆ ಪ್ರಕಟಗೊಂಡ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ತಮಗೆ ತೃಪ್ತಿ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ..

Lingaraj Badiger
Updated On : 12 Mar 2013, 1:55 am

ಬೆಂಗಳೂರು: ನಿನ್ನೆ ಪ್ರಕಟಗೊಂಡ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ತಮಗೆ ತೃಪ್ತಿ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಇಂದು ಮಲ್ಲೇಶ್ವರಂನ ತಮ್ಮ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಯಡಿಯೂರಪ್ಪ, ಈ ಚುನಾವಣೆ ಫಲಿತಾಂಶ ತಮಗೆ ತೃಪ್ತಿ ತಂದಿದೆ. ಪಕ್ಷ ಉತ್ತಮ ಸಾಧನೆ ತೋರಿದೆ ಎಂದರು. ಅಲ್ಲದೆ ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕದಲ್ಲಿ ಪಕ್ಷಕ್ಕೆ ಉತ್ತಮ ಸ್ಪಂದನೆ ದೊರೆತಿದೆ. ಪಕ್ಷ ಕಟ್ಟಲು ಈ ಚುನಾವಣೆ ವರವಾಗಲಿದೆ ಎಂದು ಹೇಳಿದರು.

ಮುಂಬರುವ ವಿಧಾನಸಭೆ ಚುನಾವಣೆಯನ್ನು ತಾವು ಒಂದು ಸವಾಲಾಗಿ ಸ್ವೀಕರಿಸಿದ್ದು, ಕೆಜೆಪಿ ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ, ಯಡಿಯೂರಪ್ಪ ಇಲ್ಲದ ಬಿಜೆಪಿ ಸ್ಥಿತಿ ದಯನೀಯವಾಗಿದೆ. ಇಷ್ಟು ಬೇಗ ಆ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬರುತ್ತದೆ ಎಂದು ನಾನು ಭಾವಿಸಿರಲಿಲ್ಲ. ಇದನ್ನು ಬಿಜೆಪಿಯ ರಾಷ್ಟ್ರೀಯ ನಾಯಕರು ಅರ್ಥಮಾಡಿಕೊಳ್ಳಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement