ನೂತನ ಪೊಲೀಸ್ ಆಯುಕ್ತ ಕಚೇರಿ ಉದ್ಘಾಟನೆ
ಬೆಂಗಳೂರು: ನೂತನವಾಗಿ ನಿರ್ಮಿಸಿರುವ ಅತ್ಯಾಧುನಿಕ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯನ್ನು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಂಗಳವಾರ ಉದ್ಘಾಟಿಸಿದರು.
ರು. 34 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ 6 ಮಹಡಿಗಳ ಈ ಕಟ್ಟಡ, ಬೆಂಗಳೂರು ನಗರ ಆಯುಕ್ತರ ಹಾಗೂ ಜಂಟಿ ಆಯುಕ್ತರ ಕಚೇರಿಗಳನ್ನು ಒಳಗೊಂಡಿದೆ. ವಿಶೇಷವೆಂದರೆ ಕಟ್ಟಡದಲ್ಲಿ ಅಂತರಾಷ್ಟ್ರೀಯ ಮಟ್ಟದ ಅತ್ಯಾಧುನಿಕ ಪೊಲೀಸ್ ಕಂಟ್ರೋಲ್ ರೂಮ್ ಹಾಗೂ ಕಟ್ಟಡದ ಮೇಲೆ ಹೇಲಿಪ್ಯಾಡ್ ಸಹ ಇದೆ.
ಉದ್ಘಾಟನೆ ಬಳಿಕ ಮಾತನಾಡಿದ ಶೆಟ್ಟರ್, ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಗೆ ಬಲ ತುಂಬಲು ಬಿಜೆಪಿ ಸರ್ಕಾರ ಬದ್ಧವಾಗಿದೆ. ಪೊಲೀಸರಿಗೆ ಮೂಲಭೂತ ಸೌಕರ್ಯಗಳು ಸೇರಿದಂತೆ ಜಿಲ್ಲಾವಾರು ಸಂಚಾರಿ ಪೊಲೀಸ್ ಠಾಣೆಗಳ ನಿರ್ಮಾಣ, ಬೆಳಗಾವಿಯಲ್ಲಿ ಜಂಟಿ ಆಯುಕ್ತರ ಕಚೇರಿ ಕಟ್ಟಡದ ಶಂಕು ಸ್ಥಾಪನೆ, ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಪೊಲೀಸ್ ಆಯುಕ್ತರ ಕಚೇರಿ ಮೇಲ್ದರ್ಜೆಗೇರಿಸುವ ಯೋಜನೆಗಳು ಸರ್ಕಾರದ ಮುಂದಿವೆ ಎಂದು ಹೇಳಿದರು. ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಆರ್.ಅಶೋಕ್, ಈಶ್ವರಪ್ಪ, ಬಿಬಿಎಂಪಿ ಮೇಯರ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.
100 ವರ್ಷಗಳಷ್ಟು ಹಳೆದಾದ ಈಗಿನ ನಗರ ಪೊಲೀಸ್ ಆಯುಕ್ತರ ಕಚೇರಿಯ ಹಿಂಬದಿಯಲ್ಲೇ ಈ ಬೃಹತ್ 6 ಮಹಡಿ ಕಟ್ಟಡ ನಿರ್ಮಾಣಗೊಂಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.