ಶ್ರೀನಗರದಲ್ಲಿ ಉಗ್ರರ ದಾಳಿ: ಹೊಣೆ ಹೊತ್ತ ಹಿಜ್ಬುಲ್ ಮುಜಾಹಿದ್ದಿನ್
ಹಿಜ್ಬುಲ್ ಮುಜಾಹಿದ್ದಿನ್ ಉಗ್ರ ಸಂಘಟನೆ ಶ್ರೀನಗರದ ಹೃದಯ ಭಾಗದಲ್ಲಿ ಬುಧವಾರ ನಡೆದ ಉಗ್ರ ದಾಳಿಯ ಹೊಣೆ ಹೊತ್ತುಕೊಂಡಿದೆ.
ಶ್ರೀನಗರ: ಹಿಜ್ಬುಲ್ ಮುಜಾಹಿದ್ದಿನ್ ಉಗ್ರ ಸಂಘಟನೆ ಶ್ರೀನಗರದ ಹೃದಯ ಭಾಗದಲ್ಲಿ ಬುಧವಾರ ನಡೆದ ಉಗ್ರ ದಾಳಿಯ ಹೊಣೆ ಹೊತ್ತುಕೊಂಡಿದೆ.
ಶ್ರೀನಗರದ ಬೆಮಿನಾ ಪ್ರದೇಶದಲ್ಲಿರುವ ಸಿಆರ್ಪಿಎಫ್ ಕ್ಯಾಂಪ್ ಮೇಲೆ ಇಂದು ಬೆಳಗ್ಗೆ ಉಗ್ರರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಐವರು ಯೋಧರು ಮೃತಪಟ್ಟಿದ್ದರು ಮತ್ತು ಹಲವು ಯೋಧರು ಗಾಯಗೊಂಡಿದ್ದರು.
ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಕಾರ್ಯದರ್ಶಿ ಆರ್.ಕೆ ಸಿಂಗ್ ಅವರು, ಭಾರತ-ಪಾಕ್ ಗಡಿಯಲ್ಲಿ ಈ ದಾಳಿ ನಡೆದಿದ್ದು, ಉಗ್ರರು ಪಾಕಿಸ್ತಾನದಿಂದ ನುಸುಳಿ ಬಂದಿರುವ ಸಾಧ್ಯತೆ ಇದೆ ಎಂದಿದ್ದಾರೆ. ಅಲ್ಲದೆ ದಾಳಿಯ ಬಗ್ಗೆ ತನಿಖೆಗೆ ಆದೇಶಿದ್ದಾರೆ.