ದೆಹಲಿ ತಿಹಾರ್ ಜೈಲಿನಲ್ಲಿ ಮತ್ತೊಂದು ಆತ್ಮಹತ್ಯೆ
ದೆಹಲಿಯ ತಿಹಾರ್ ಜೈಲಿನಲ್ಲಿ ಮತ್ತೊಬ್ಬ ಖೈದಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ವರದಿಯಾಗಿದೆ.
ನವದೆಹಲಿ: ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ರಾಮ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇನ್ನೂ ಹಸಿರಾಗಿರುವಾಗಲೇ ದೆಹಲಿಯ ತಿಹಾರ್ ಜೈಲಿನಲ್ಲಿ ಮತ್ತೊಬ್ಬ ಖೈದಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ವರದಿಯಾಗಿದೆ.
30 ವರ್ಷದ ಮಹಿಳಾ ಖೈದಿಯೊಬ್ಬರು ಇಂದು ತಮ್ಮ ಜೈಲಿನ ಕೊಠಡಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಪಹರಣ ಪ್ರಕರಣವೊಂದರಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಈ ಮಹಿಳೆ ಇಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸ್ಥಳಕ್ಕೆ ತಿಹಾರ್ ಜೈಲಿನ ಅಧಿಕಾರಿಗಳು ಧಾವಿಸಿದ್ದು, ಸಹಖೈದಿಗಳ ವಿಚಾರಣೆ ನಡೆಸುತ್ತಿದ್ದಾರೆ.
ದೇಶದ ಅತ್ಯಂತ ಭದ್ರತೆ ಮತ್ತು ಸುಸಜ್ಜಿತ ವ್ಯವಸ್ಥೆ ಹೊಂದಿದ ಜೈಲು ಎಂದೇ ಖ್ಯಾತವಾಗಿದ್ದ ತಿಹಾರ್ ಜೈಲಿನಲ್ಲಿ ಒಂದರ ಹಿಂದೊಂದರಂತೆ ಆತ್ಮಹತ್ಯೆ ಘಟನೆಗಳು ಜರುಗಿರುವುದು ಜೈಲಿನ ಭದ್ರತೆಯ ಕುರಿತು ಅನುಮಾನ ಮೂಡುವಂತೆ ಮಾಡಿದೆ.