ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಯುಪಿಎಸ್‌ಸಿ ನೂತನ ನಿಯಮಕ್ಕೆ ತಾತ್ಕಾಲಿಕ ತಡೆ

ಯುಪಿಎಸ್‌ಸಿಯ ಬದಲಾದ ನಿಯಮಾವಳಿಗೆ ಕೇಂದ್ರ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ.

Srinivasa Murthy VN
Updated On : 15 Mar 2013, 3:11 am

ನವದೆಹಲಿ: ಯುಪಿಎಸ್‌ಸಿಯ ಬದಲಾದ ನಿಯಮಾವಳಿಗೆ ಕೇಂದ್ರ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ.

ಪ್ರಾದೇಶಿಕ ಭಾಷೆಗಳನ್ನು ನಿರ್ಲಕ್ಷ್ಯಿಸಿ ನಾಗರಿಕ ಸೇವಾ ಪರೀಕ್ಷೆ(ಐಎಎಸ್)ಯಲ್ಲಿ ನೂತನ ನಿಯಮಾವಳಿಗಳನ್ನು ಅಳವಡಿಸಿದ್ದ ಕೇಂದ್ರ ಲೋಕಸೇವಾ ಆಯೋಗದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಇಂದು ಕೇಂದ್ರ ಸರ್ಕಾರ ನೂತನ ನಿಯಮಾವಳಿಗಳಿಗೆ ತಡೆ ನೀಡಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಸಚಿವ ನಾರಾಯಣಸ್ವಾಮಿ ಅವರು, ಪರೀಕ್ಷಾ ವಿಧಾನ ಮತ್ತು ನೂತನ ನಿಯಾವಳಿಗಳ ಕುರಿತು ಉತ್ತರ ಭಾರತದ ರಾಜ್ಯಗಳು ಸೇರಿದಂತೆ ಹಲವು ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತಿವೆ. ಹೀಗಾಗಿ ನೂತನ ನಿಯಮಾವಳಿಗೆ ತಾತ್ಕಾಲಿಕ ತಡೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಇಂದು ಲೋಕಸಭೆಯಲ್ಲಿ ಯುಪಿಎಸ್‌ಸಿ ಪರೀಕ್ಷೆಯ ನೂತನ ನಿಯಮಾವಳಿಗಳ ಕುರಿತು ತೀವ್ರ ಆಕ್ಷೇಪ ವ್ಯಕ್ತವಾಯಿತು. ಎಸ್‌ಪಿ ಮತ್ತು ಆರ್‌ಜೆಡಿ ಪಕ್ಷಗಳು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಗೆ ಶಿವಸೇನಾ, ಡಿಎಂಕೆ, ಜೆಡಿ(ಯು) ಪಕ್ಷಗಳು ಕೈ ಜೋಡಿಸಿದ ಹಿನ್ನಲೆಯಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತು. ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಂತೆಯೇ ಸ್ಪೀಕರ್ ಮೀರಾ ಕುಮಾರ್ ಅವರು ಸದನವನ್ನು ಒಂದು ಗಂಟೆ ಮುಂದೂಡಿದರು.

ಒಟ್ಟಾರೆ ಯುಪಿಎಸ್‌ಸಿ ಪರೀಕ್ಷಾ ನಿಯಮದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ನೂತನ ನಿಯಮಗಳಿಗೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement