ಲಂಕಾದಿಂದ 34 ಭಾರತೀಯ ಮೀನುಗಾರರ ಬಿಡುಗಡೆ
ಶ್ರೀಲಂಕಾ ಸರ್ಕಾರ ಶುಕ್ರವಾರ 34 ಮೀನುಗಾರರನ್ನು ಬಿಡುಗಡೆ ಮಾಡಿ ಭಾರತಕ್ಕೆ ಹಸ್ತಾಂತರಿಸಿದೆ.
ಜಾಫ್ನಾ: ಶ್ರೀಲಂಕಾ ಸರ್ಕಾರ ಶುಕ್ರವಾರ 34 ಮೀನುಗಾರರನ್ನು ಬಿಡುಗಡೆ ಮಾಡಿ ಭಾರತಕ್ಕೆ ಹಸ್ತಾಂತರಿಸಿದೆ.
ಶ್ರೀಲಂಕಾದ ಜಾಫ್ನಾ ಕಡಲ ತೀರದಲ್ಲಿ ಉಭಯ ದೇಶಗಳ ಅಧಿಕಾರಿಗಳ ಸಮ್ಮುಖದಲ್ಲಿ ಲಂಕಾದ ಅಧಿಕಾರಿಗಳು ಅಧಿಕೃತವಾಗಿ 34 ಮೀನುಗಾರರನ್ನು ಭಾರತಕ್ಕೆ ಹಸ್ತಾತಂತರಿಸಿದ್ದಾರೆ.
ಉಭಯ ದೇಶಗಳ ಸಮುದ್ರ ಗಡಿ ಕಾಟ್ಚತೀವು ದ್ವೀಪಪ್ರದೇಶದಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ತಮಿಳುನಾಡಿನ 34 ಮೀನುಗಾರರನ್ನು ಶ್ರೀಲಂಕಾದ ಕರಾವಳಿ ಪೊಲೀಸರು ಬಂಧಿಸಿದ್ದರು. ಅಲ್ಲದೆ 6 ಮೀನುಗಾರಿಕಾ ಬೋಟ್ಗಳನ್ನು ವಶಕ್ಕೆ ತೆಗೆದುಕೊಂಡಿದ್ದರು. ಬಂಧಿತರೆಲ್ಲರೂ ತಮಿಳುನಾಡಿನ ರಾಮೇಶ್ವರಂ ಮೂಲದವೆರಂದು ಹೇಳಲಾಗುತ್ತಿತ್ತು. ಈ ಹಿನ್ನಲೆಯಲ್ಲಿ ಬಂಧಿತ ಮೀನುಗಾರರನ್ನು ಬಿಡುಗಡೆಗೊಳಿಸುವಂತೆ ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿತ್ತು.
ನಿನ್ನೆ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷೀದ್ ಅವರು ಮಾತನಾಡಿ, 'ನಾವು ಶ್ರೀಲಂಕಾ ಸರ್ಕಾರದೊಂದಿಗೆ ಚರ್ಚಿಸಿದ್ದೇವೆ. ಲಂಕಾ ಸರ್ಕಾರ ನಮಗೆ ಸಕಾರತ್ಮಕವಾಗಿ ಪ್ರತಿಕ್ರಿಯಿಸಿದೆ' ಎಂದು ಹೇಳಿದ್ದರು.