ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಜಿಲ್ಲಾಧಿಕಾರಿ ಅಯ್ಯಪ್ಪಗೆ ಜಾಮೀನು

ಭೂ ದಾಖಲೆಗಳ ತಿದ್ದುಪಡಿ ಮಾಡಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಬೆಂ.ಗ್ರಾಮಾಂತರ ಜಿಲ್ಲಾಧಿಕಾರಿ ಎಂ.ಕೆ.ಅಯ್ಯಪ್ಪ ಸೇರಿದಂತೆ ಇತರ ನಾಲ್ವರಿಗೆ ಜಾಮೀನು ಸಿಕ್ಕಿದೆ.

Lingaraj Badiger
Updated On : 16 Mar 2013, 5:46 am

ಬೆಂಗಳೂರು: ಭೂ ದಾಖಲೆಗಳ ತಿದ್ದುಪಡಿ ಮಾಡಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎಂ.ಕೆ.ಅಯ್ಯಪ್ಪ ಸೇರಿದಂತೆ ಇತರ ನಾಲ್ವರಿಗೆ ಲೋಕಾಯುಕ್ತ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.

ಅಯ್ಯಪ್ಪ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ಕೋರ್ಟ್‌ನ ನ್ಯಾಯಮೂರ್ತಿ ಸುಧೀಂದ್ರರಾವ್ ಅವರು, 5 ಲಕ್ಷ ರುಪಾಯಿ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಷರತ್ತುಬದ್ಧ ಜಾಮೀನು ನೀಡಿದ್ದಾರೆ. ಅಲ್ಲದೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುದಂತೆ ಜಿಲ್ಲಾಧಿಕಾರಿಗೆ ಎಚ್ಚರಿಕೆ ನೀಡಿದ್ದಾರೆ.

ಇದೇ ಪ್ರಕರಣ ಸಂಬಂಧ ಬಂಧಿತರಾಗಿದ್ದ ಬೆಂಗಳೂರು ಉತ್ತರ ತಾಲೂಕು ವಿಶೇಷ ತಹಸೀಲ್ದಾರ್ ಕೆ.ಗೋಪಾಲಸ್ವಾಮಿ, ಬೆಂಗಳೂರು ಉತ್ತರ ತಾಲೂಕು, ಅರಕೆರೆ ವೃತ್ತ ರಾಜಸ್ವ ನಿರೀಕ್ಷಕ ಎನ್.ಬಾಲಕೃಷ್ಣಮೂರ್ತಿ ಹಾಗೂ ಹೆಸರಘಟ್ಟ ಉಪ ನೋಂದಣಾಧಿಕಾರಿ ಕೆ.ವಿ.ರವಿಕುಮಾರ್ ಅವರಿಗೂ ಲೋಕಾಯುಕ್ತ ಕೋರ್ಟ್ ಜಾಮೀನು ನೀಡಿದೆ.

ಸರ್ಕಾರಿ ಜಮೀನು ಕಬಳಿಸಲು ಕಂದಾಯ ಇಲಾಖೆ ದಾಖಲೆಗಳ ತಿದ್ದುಪಡಿ ಮಾಡುವುದರ ಜೊತೆಗೆ ನಕಲಿ ದಾಖಲೆ ಸೃಷ್ಟಿಸಿ ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಕಳೆದ ಬುಧವಾರ ಅಯ್ಯಪ್ಪ ಹಾಗೂ ಇತರ ಮೂವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement