ಸೆಮಿಫೈನಲ್ಗೆ ಸೈನಾ
ಭಾರತದ ಬ್ಯಾಡ್ಮಿಂಟನ್ ಸ್ಟಾರ್ ಆಟಗಾರ್ತಿ ಸೈನಾ ನೆಹ್ವಾಲ್ ಅವರು ಸ್ವೀಸ್ ಓಪನ್ ಗ್ರ್ಯಾಂಡ್ ಪ್ರಿಕ್ಸ್ ಗೊಲ್ಡ್ ಮಹಿಳೆಯರ...
ಬಾಸೆಲ್: ಭಾರತದ ಬ್ಯಾಡ್ಮಿಂಟನ್ ಸ್ಟಾರ್ ಆಟಗಾರ್ತಿ ಸೈನಾ ನೆಹ್ವಾಲ್ ಅವರು ಸ್ವೀಸ್ ಓಪನ್ ಗ್ರ್ಯಾಂಡ್ ಪ್ರಿಕ್ಸ್ ಗೊಲ್ಡ್ ಮಹಿಳೆಯರ ಸಿಂಗಲ್ಸ್ ಪಂದ್ಯಾವಳಿಯಲ್ಲಿ ಶನಿವಾರ ಸೆಮಿಫೈನಲ್ ತಲುಪಿದ್ದಾರೆ.
ಶನಿವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಅವರು, ಚೀನಾದ ಜು ಯಿಂಗ್ ತೈ ಅವರ ವಿರುದ್ಧ 21-11, 21-12 ನೇರ ಸೆಟ್ಗಳ ಅಂತರದಲ್ಲಿ ಜಯಸಾಧಿಸಿದರು. ಈ ಗೆಲುವಿನಿಂದಾಗಿ ಸೈನಾ, ವಿಶ್ವ ರ್ಯಾಂಕಿಂಗ್ನಲ್ಲಿ ಮತ್ತೆ ಎರಡನೇ ಸ್ಥಾನಕ್ಕೆ ಸೈನಾ ಮರಳಿದ್ದಾರೆ.
ಪಂದ್ಯದ ಆರಂಭದಿಂದಲ್ಲೂ ಸೈನಾ ಪಂದ್ಯದ ಮೇಲೆ ಹಿಡಿತ ಸಾಧಿಸಿದಲ್ಲದೆ, ಎದುರಾಳಿ ಆಟಗಾರ್ತಿಯ ತಪ್ಪು ಎಸೆತಗಳ ಲಾಭ ಪಡೆದು ಪಂದ್ಯ ಜಯಿಸಿದರು.
ಶುಕ್ರವಾರ ನಡೆದ ಪ್ರೀ- ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸೈನಾ, ಬಲ್ಗೇರಿಯಾದ ಪೆಟ್ಯಾ ನೆಡೆಲ್ಚೆವಾ ಅವರ ವಿರುದ್ಧ 21-15, 21-10 ಅಂತರದಲ್ಲಿ ಜಯ ಸಾಧಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.