ಸ್ವಿಸ್ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಸ್ವಿಸ್ ದೇಶದ ಮಹಿಳೆಯನ್ನು ಎಂಟು ಜನರು ಸಾಮೂಹಿಕವಾಗಿ ಅತ್ಯಾಚಾರವೆಸಗಿದ ಘಟನೆ ಮಧ್ಯಪ್ರದೇಶದ ದಾಟಿಯಾ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಭೊಪಾಲ್: ಸ್ವಿಸ್ ದೇಶದ ಮಹಿಳೆಯನ್ನು ಎಂಟು ಜನರು ಸಾಮೂಹಿಕವಾಗಿ ಅತ್ಯಾಚಾರವೆಸಗಿದ ಘಟನೆ ಮಧ್ಯಪ್ರದೇಶದ ದಾಟಿಯಾ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಈ ಮಹಿಳೆ ರಾತ್ರಿ ಸಮಯದಲ್ಲಿ ಸೈಕಲ್ನಲ್ಲಿ ತನ್ನ ಪತಿಯೊಂದಿಗೆ ರಸ್ತೆಯಲ್ಲಿ ಬರುತ್ತಿರುವಾಗ ಎಂಟು ಜನರ ತಂಡ ಸುಲಿಗೆ ಮಾಡಿ ನಂತರ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ದಾಟಿಯಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಎಸ್.ಸೋಲಂಕಿ ತಿಳಿಸಿದ್ದಾರೆ.
ಸ್ವಿಸ್ ದಂಪತಿಗಳು ಭಾರತಕ್ಕೆ ಪ್ರವಾಸಕ್ಕೆಂದು ಆಗಮಿಸಿದ್ದು, ಸೈಕಲ್ನಲ್ಲಿ ದಂಪತಿಗಳು ಪ್ರವಾಸ ಮಾಡುತ್ತಿದ್ದರು. ಈ ಸಂಬಂಧ ಮಧ್ಯಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಅತ್ಯಾಚಾರಕ್ಕೆ ಬಲಿಯಾಗಿರುವ ಮಹಿಳೆಯನ್ನು ಗ್ವಾಲಿಯರ್ನ ಕಮಲರಾಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಡಪಟ್ಟಿದೆ ಎಂದು ಸೋಲಂಕಿ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.