ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮೀನುಗಾರರಿಗೆ ಬೆದರಿಕೆ: ನಟ ಸಲ್ಮಾನ್ ಖಾನ್ ವಿಚಾರಣೆ..?

ಮೀನುಗಾರರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ.

Srinivasa Murthy VN
Updated On : 17 Mar 2013, 4:32 am

ಮುಂಬಯಿ: ಮೀನುಗಾರರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ.

69 ವರ್ಷದ ಹಿರಿಯ ಮೀನುಗಾರರಾದ ಲಾರೆನ್ಸ್ ಪಾಲ್ಕನ್ ಅವರು ಸಲ್ಮಾನ್ ವಿರುದ್ಧ ಬೆದರಿಕೆ ಪ್ರಕರಣ ದಾಖಲಿಸಿದ್ದಾರೆ. ಸಲ್ಮಾನ್ ನಿವಾಸದ ಸಮೀಪದಲ್ಲಿಯೇ ಪಾಲ್ಕನ್ ಅವರು ತಮ್ಮ ಮೀನುಗಾರಿಕಾ ಬೋಟ್ ಅನ್ನು ನಿಲ್ಲಿಸುತ್ತಿರುವುದರಿಂದ ನಟ ಸಲ್ಮಾನ್ ಖಾನ್ ಅವರಿಗೆ ಸಮುದ್ರದ ಸುಂದರ ದೃಶ್ಯಗಳು ಕಾಣಿಸುತ್ತಿಲ್ಲ ಎಂದು ಆರೋಪಿಸಿ ಸಲ್ಮಾನ್ ಅಂಗರಕ್ಷಕರು, ಪಾಲ್ಕನ್ ಅವರನ್ನು ಜಾಗ ಖಾಲಿಮಾಡುವಂತೆ ಬೆದರಿಕೆ ಹಾಕಿದ್ದರು ಎಂದು ಸ್ವತಃ ಪಾಲ್ಕನ್ ಅವರು ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ.

ಪ್ರಕರಣವನ್ನು ದಾಖಲಿಸಿಕೊಂಡಿರುವ ಬಾಂದ್ರಾ ಪೊಲೀಸರು ವಿಚಾರಣೆ ಸಂಬಂಧ ಶೀಘ್ರದಲ್ಲಿಯೇ ಸಲ್ಮಾನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ನಟ ಸಲ್ಮಾನ್ ಖಾನ್ ರನ್ನು ಮುಂದಿನ ವಾರದ ಆರಂಭದಲ್ಲಿ ಪೊಲೀಸರು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಕೃಷ್ಣ ಮೃಗ ಬೇಟೆಯಂತಹ ಗಂಭೀರ ಪ್ರಕರಣಗಳ ವಿಚಾರಣೆ ಎದುರಿಸುತ್ತಿರುವ ನಟ ಸಲ್ಮಾನ್ ಖಾನ್ ಇದೀಗ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement