ಕಾವೇರಿ ವಿವಾದ: ತ.ನಾಡಿನಿಂದ ಸುಪ್ರೀಂಗೆ ಮಧ್ಯಂತರ ಅರ್ಜಿ
ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ತಮಿಳುನಾಡು ಸರ್ಕಾರ ಮತ್ತೆ ತಗಾದೆ ತೆಗೆದಿದ್ದು, ಕಾವೇರಿ ನಿಯಂತ್ರಣ ಮಂಡಳಿಯನ್ನು ಮೇ ತಿಂಗಳಲ್ಲೇ...
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ತಮಿಳುನಾಡು ಸರ್ಕಾರ ಮತ್ತೆ ತಗಾದೆ ತೆಗೆದಿದ್ದು, ಕಾವೇರಿ ನಿಯಂತ್ರಣ ಮಂಡಳಿಯನ್ನು ಮೇ ತಿಂಗಳಲ್ಲೇ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕೆಂದು ಕೋರಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಸೋಮವಾರ ಮಧ್ಯಂತರ ಅರ್ಜಿ ಸಲ್ಲಿಸಿದೆ.
ಈಗಾಗಲೇ ತಮಿಳುನಾಡಿಗೆ ನೀರು ಹಂಚಿಕೆಯಲ್ಲಿ ಅನ್ಯಾಯವಾಗಿದ್ದು, ಮೇ ಮೊದಲ ವಾರದೊಳಗೆ ಕಾವೇರಿ ನಿಯಂತ್ರಣ ಮಂಡಳಿ ರಚಿಸಬೇಕೆಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದೆ.
ತಮಿಳುನಾಡಿನ ಮನವಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸುವ ಸಾಧ್ಯತೆ ಇದ್ದು, ಈ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಕಾವೇರಿ ಮಂಡಳಿ ರಚನೆ ಗಡುವು ವಿಧಿಸುವ ಸಾಧ್ಯತೆ ಇದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.