ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

'ಕೈ' ಹಿಡಿದ ಶಂಕರ್ ಬಿದರಿ

ಖಾಕಿ ನಂತರ ಖಾದಿ ಹಾಕಲು ನಿರ್ಧರಿಸಿದ್ದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಶಂಕರ್ ಮಹಾದೇವ್ ಬಿದರಿ ಅವರು ಸೋಮವಾರ ಕಾಂಗ್ರೆಸ್ ಸೇರಿದ್ದಾರೆ.

Lingaraj Badiger
Updated On : 18 Mar 2013, 1:50 am

ಬೆಂಗಳೂರು: ಖಾಕಿ ನಂತರ ಖಾದಿ ಹಾಕಲು ನಿರ್ಧರಿಸಿದ್ದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಶಂಕರ್ ಮಹಾದೇವ್ ಬಿದರಿ ಅವರು ಸೋಮವಾರ ಕಾಂಗ್ರೆಸ್ ಸೇರಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಹಾಗೂ ರಾಜ್ಯ ಉಸ್ತುವಾರಿ ಮಧುಸೂದನ್ ಮಿಸ್ತ್ರಿ ಅವರ ನೇತೃತ್ವದಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿದರಿ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು.

ಈ ವೇಳೆ ಮಾತನಾಡಿದ ಬಿದರಿ, ಜನರ ರುಣ ತೀರಿಸಲು ತಾವು ರಾಜಕೀಯ ಪ್ರವೇಶಿಸುತ್ತಿರುವುದಾಗಿ ಹೇಳಿದರು. ಅಲ್ಲದೆ ದೇಶದಲ್ಲಿ ಎಲ್ಲರೂ ಒಪ್ಪಬಹುದಾದ ಪಕ್ಷ ಕಾಂಗ್ರೆಸ್ ಮಾತ್ರ. ಹೀಗಾಗಿ ತಾವು ಕಾಂಗ್ರೆಸ್ ಸೇರುತ್ತಿರುವುದಾಗಿ ತಿಳಿಸಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರು ಬಯಸುವ ಕ್ಷೇತ್ರದಲ್ಲಿ ಸ್ಪರ್ಧಿಸುವ ಮುಕ್ತ ಅವಕಾಶವನ್ನು ಬಿದರಿ ಅವರಿಗೂ ಕಾಂಗ್ರೆಸ್ ನೀಡಿದೆ ಎಂದು ತಿಳಿದು ಬಂದಿದೆ.  ಪೊಲೀಸ್ ವೃತ್ತಿಯ ಕೊನೆಯ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸಿ ಯಶಸ್ವಿಯಾದ ಬಿದರಿ ಅವರು ಬದಲಾದ ರಾಜಕಾರಣದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಆಯ್ಕೆ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement