ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕನ್ನಡದ 'ಭಾರತ್ ಸ್ಟೋರ್ಸ್‌' ಅತ್ಯುತ್ತಮ ಪ್ರಾದೇಶಿಕ ಚಿತ್ರ

60ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸೋಮವಾರ ಪ್ರಕಟವಾಗಿದ್ದು, ಅತ್ಯುತ್ತಮ ಪ್ರಾದೇಶಿಕ ಭಾಷಾ ಚಲನಚಿತ್ರ ಪ್ರಶಸ್ತಿಗೆ ಕನ್ನಡದ 'ಭಾರತ್ ಸ್ಟೋರ್ಸ್‌' ಆಯ್ಕೆಯಾಗಿದೆ...

Parashurama
Updated On : 18 Mar 2013, 4:33 am

ನವದೆಹಲಿ: 60ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸೋಮವಾರ ಪ್ರಕಟವಾಗಿದ್ದು, ಅತ್ಯುತ್ತಮ ಪ್ರಾದೇಶಿಕ ಭಾಷಾ ಚಲನಚಿತ್ರ ಪ್ರಶಸ್ತಿಗೆ ಕನ್ನಡದ 'ಭಾರತ್ ಸ್ಟೋರ್ಸ್‌' ಆಯ್ಕೆಯಾಗಿದೆ.

ಬಾಲಿವುಡ್‌ನ "ಕಹಾನಿ' ಚಿತ್ರ ಅತ್ಯುತ್ತಮ ರಾಷ್ಟ್ರೀಯ ಚಿತ್ರ ಪ್ರಶಸ್ತಿ ಪಡೆದುಕೊಂಡಿ. ಇನ್ನು ಅತ್ಯುತ್ತಮ ನಟ ಪ್ರಶಸ್ತಿಯನ್ನು ಇರ್ಫಾನ್ ಖಾನ್ ಹಾಗೂ ವಿಕ್ರಂ ಗೋಖಲೆ ಅವರು ಪಡೆದುಕೊಂಡರೆ, ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪರಿಣಿತಿ ಚೋಪ್ರಾ ಅವರು ಪಡೆದುಕೊಂಡಿದ್ದಾರೆ.

ಪ್ರತಿ ವರ್ಷ ಭಾರತ ಸರ್ಕಾರ ಕೊಡಮಾಡುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಇಂದು ಬಸು ಚಟರ್ಜಿ ನೇತೃತ್ವದ ತೀರ್ಪುಗಾರರ ಸಮಿತಿ ಘೋಷಿಸಿದೆ.

ಪ್ರಶಸ್ತಿ ಪಟ್ಟಿ
ಅತ್ಯುತ್ತಮ ಹಿನ್ನೆಲೆ ಗಾಯಕ: ಶಂಕರ್ ಮಹದೇವನ್ (ಬೋಲೋ ನಾ)
ಅತ್ಯುತ್ತಮ ಹಿನ್ನೆಲೆ ಗಾಯಕಿ: ಆರತಿ ಆಂಕಾಲಿಕರ್ (ಸಂಹಿತಾ ಮರಾಠಿ ಚಿತ್ರ)
ಅತ್ಯುತ್ತಮ ಚಿತ್ರ : ಕಹಾನಿ
ಅತ್ಯುತ್ತಮ ತೆಲಗು ಚಿತ್ರ: ಈಗ
ಅತ್ಯುತ್ತಮ ಸಂಕಲನ: ಓ ಮೈ ಗಾಡ್
ಅತ್ಯುತ್ತಮ ಮಕ್ಕಳ ಚಿತ್ರ:
ಅತ್ಯುತ್ತಮ ಮರಾಠಿ ನಟಿ: ಉಶಾ ಜದಾವ್ (ಧಾಗ್)
ವಿಶೇಷ ತೀರ್ಪುಗಾರರ ಪ್ರಶಸ್ತಿ: ಪರಿಣಿತಿ (ನಟಿ)
ವಿಶೇಷ ತೀರ್ಪುಗಾರರ ಪ್ರಶಸ್ತಿ: ನವಾಜುದ್ದಿನ್ (ನಟ)
ವಿಶೇಷ ತೀರ್ಪುಗಾರರ ಪ್ರಶಸ್ತಿ: ಚಿತ್ರಾಂಗಧ (ಚಿತ್ರ)
ಅತ್ಯುತ್ತಮ ನೃತ್ಯ ಸಂಯೋಜನೆ: ಪಂ. ಬಿಜು ಮಹಾರಾಜ್ (ವಿಶ್ವರೂಪಂ)

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments