ಸಮ್ಮತಿ ಸೆಕ್ಸ್ಗೆ 18 ತುಂಬಲೇಬೇಕು!
ನವದೆಹಲಿ: ಅತ್ಯಾಚಾರ ತಡೆ ಮಸೂದೆ ಕಾಯ್ದೆಯಲ್ಲಿ ಸಮ್ಮತಿ ಸೆಕ್ಸ್ನ್ನು 16ರ ಬದಲು 18ಕ್ಕೆ ಸೀಮಿತಗೊಳಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಸೋಮವಾರ ಮೂಲಗಳು ತಿಳಿಸಿವೆ.
ಕೇಂದ್ರ ಸರ್ಕಾರ ಮಂಗಳವಾರ ಸಂಸತ್ನಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಅತ್ಯಾಚಾರ ತಡೆ ಮಸೂದೆ ಕಾಯ್ದೆಯಲ್ಲಿ ಸಮ್ಮತಿ ಸೆಕ್ಸ್ ವಯಸ್ಸನ್ನು 18 ಮಾಡುವ ಸಾಧ್ಯತೆ ಇದೆ. ಈ ಕಾಯ್ದೆಯ ಪ್ರಕಾರ 18 ವರ್ಷ ಒಳಗಿನ ಅಪ್ರಾಪ್ತೆಯ ಮೇಲೆ ಸಮ್ಮತಿ ಇರದ ಲೈಂಗಿಕ ಕ್ರಿಯೆ ಮಾಡಿದರೆ ಅದನ್ನು ಅತ್ಯಾಚಾರವೆಂದು ಪರಿಗಣಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಕಾಯ್ದೆ ಪ್ರಕಾರ ಮೊದಲ ಬಾರಿ ಅಪ್ರಾಪ್ತನೊಬ್ಬ ಅತ್ಯಾಚಾರವೆಸಗಿದ್ದರೆ ಆತನಿಗೆ 1ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಎರಡನೇ ಬಾರಿ ತಪ್ಪು ಮಾಡಿದಾಗ ಆತನ ಮೇಲೆ ಅತ್ಯಾಚಾರದ ಪ್ರಕರಣದ ಅಡಿ ಶಿಕ್ಷೆ ವಿಧಿಸಲಾಗುತ್ತದೆ.
ಈ ಮಸೂದೆ ಜಾರಿಗೆ ತರುವ ಸಂಬಂಧ ಇಂದು ಸಂಜೆ ಕೇಂದ್ರ ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.