ಯುಪಿಎ ಸರ್ಕಾರ ಸ್ಥಿರವಾಗಿದೆ: ಚಿದು
ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಸ್ಥಿರವಾಗಿದೆ. ಸರ್ಕಾರಕ್ಕೆ ಅಗತ್ಯವಾಗಿ ಬೇಕಾದ ಸಂಖ್ಯಾಬಲ ಇದೆ ಎಂದು ಕೇಂದ್ರ ಹಣಕಾಸು ಸಚಿವ..
ಬೆಂಗಳೂರು: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಸ್ಥಿರವಾಗಿದೆ. ಸರ್ಕಾರಕ್ಕೆ ಅಗತ್ಯವಾಗಿ ಬೇಕಾದ ಸಂಖ್ಯಾಬಲ ಇದೆ ಎಂದು ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಅವರು ಮಂಗಳವಾರ ಹೇಳಿದ್ದಾರೆ.
ಶ್ರೀಲಂಕಾದಲ್ಲಿ ತಮಿಳರ ಹತ್ಯೆ ಪ್ರಕರಣ ಸಂಬಂಧ ಯುಪಿಎ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆಯುತ್ತಿರುವುದಾಗಿ ಡಿಎಂಕೆ ವರಿಷ್ಠ ಎಂ.ಕರುಣಾನಿಧಿ ಅವರು ಇಂದು ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಚಿದು, ಸರ್ಕಾರ ಸ್ಥಿರವಾಗಿದೆ ಮತ್ತು ಅಗತ್ಯ ಸಂಖ್ಯಾಬಲ ಇದೆ ಎಂದು ಹೇಳಿದರು.
ಇದೇ ವೇಳೆ ಡಿಎಂಕೆ ಮನವೊಲಿಕೆ ಮಾತುಕತೆ ಮುಂದುವರೆದಿದೆ ಎಂದು ಚಿದು ತಿಳಿಸಿದರು.