ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪ್ರಹ್ಲಾದ್ ಜೋಷಿ?

ರಾಜ್ಯ ಬಿಜೆಪಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವ ಕಸರತ್ತು ಮುಂದುವರಿದಿದ್ದು, ರಾಜ್ಯದ ಸಂಸದರು ಗುರುವಾರ...

Rashmi Kasaragodu
Updated On : 21 Mar 2013, 4:22 am

ನವದೆಹಲಿ: ರಾಜ್ಯ ಬಿಜೆಪಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವ ಕಸರತ್ತು ಮುಂದುವರಿದಿದ್ದು, ರಾಜ್ಯದ ಸಂಸದರು ಗುರುವಾರ ನವದೆಹಲಿಯಲ್ಲಿ ಸಭೆ ಸೇರಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಆದಷ್ಟು ಬೇಗ ರಾಜ್ಯಧ್ಯಕ್ಷರನ್ನು  ಆಯ್ಕೆ ಮಾಡಬೇಕಾದ ಒತ್ತಡ ಬಿಜೆಪಿಗಿದ್ದು, ಈ ಸಭೆಯಲ್ಲಿ ರಾಜ್ಯಧ್ಯಕ್ಷರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.

ಇಂದು ಮಧ್ಯಾಹ್ನ ನವದೆಹಲಿಯ ಕರ್ನಾಟಕ ಭವನದಲ್ಲಿ ನಜೆಯುತ್ತಿರುವ ಸಂಸದರ ಸಭೆಯ ನೇತೃತ್ವವನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ವಹಿಸಿದ್ದಾರೆ.
ಸಭೆಯಲ್ಲಿ ರಾಜ್ಯ ಸಂಸದರಾದ ನಳೀನ್ ಕುಮಾರ್ ಕಟೀಲ್, ಪ್ರಹ್ಲಾದ್  ಜೋಷಿ, ಆಯನೂರು ಮಂಜುನಾಥ್ ಮೊದಲಾದವರು ಭಾಗವಹಿಸಿದ್ದಾರೆ.

ಏತನ್ಮಧ್ಯೆ, ಧಾರವಾಡ ಸಂಸದ ಪ್ರಹ್ಲಾದ್ ಜೋಷಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಸಂಘ ಪರಿವಾರದ ತೀರ್ಮಾನದ ನಂತರ ಸಂಜೆಯ ವೇಳೆ ಹೈಕಮಾಂಡ್ ನಾಯಕರು ರಾಜ್ಯಾಧ್ಯಕ್ಷರ ಹೆಸರನ್ನು ಘೋಷಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement