ಸೂರ್ಯನೆಲ್ಲಿ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು
1996ರಲ್ಲಿ ನಡೆದ ಸೂರ್ಯನೆಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ 31 ಆರೋಪಿಗಳಿಗೆ ಕೇರಳ ಹೈಕೋರ್ಟ್ ಗುರುವಾರ ಜಾಮೀನು...
ಕೊಚ್ಚಿ: 1996ರಲ್ಲಿ ನಡೆದ ಸೂರ್ಯನೆಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ 31 ಆರೋಪಿಗಳಿಗೆ ಕೇರಳ ಹೈಕೋರ್ಟ್ ಗುರುವಾರ ಜಾಮೀನು ನೀಡಿದೆ.
ವಿಭಾಗೀಯ ನ್ಯಾಯಪೀಠದ ನ್ಯಾಯಮೂರ್ತಿಗಳಾದ ಕೆ.ಟಿ ಶಂಕರನ್ ಮತ್ತು ಎಂ.ಎಸ್ ಜೋಸೆಫ್ ಫ್ರಾನ್ಸಿಸ್ ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಯನ್ನು ಪರಿಶೀಲಿಸಿ ತೀರ್ಪು ನೀಡಿದ್ದಾರೆ.
ಪ್ರಸ್ತುತ ಪ್ರಕರಣದ ಏಕೈಕ ಅಪರಾಧಿ ಧರ್ಮರಾಜನ್ ಮಾತ್ರ ಇದೀಗ ಜೈಲು ವಾಸ ಅನುಭವಿಸುತ್ತಿದ್ದಾರೆ.
ಅದೇ ವೇಳೆ ಆರೋಪಿಗಳು ಮೊದಲು ವಿಚಾರಣಾ ನ್ಯಾಯಾಲಯಕ್ಕೆ ಹಾಜರಾಗಿ, ತದನಂತರ ಹೈಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಬೇಕು ಎಂಬ ಸರ್ಕಾರಿ ವಕೀಲರ ವಾದವನ್ನು ಹೈಕೋರ್ಟ್ ತಳ್ಳಿಹಾಕಿದೆ.