ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಗ್ಯಾಂಗ್‌ರೇಪ್ ವಿಚಾರಣೆ: ಮಾಧ್ಯಮಗಳ ವರದಿಗೆ 'ಹೈ' ಅನುಮತಿ

Mainashree
Updated On : 22 Mar 2013, 4:08 am

ನವದೆಹಲಿ: ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ವಿಚಾರಣೆಯ ದೈನಂದಿನ ಬೆಳವಣಿಗೆಯ ಬಗ್ಗೆ ಮಾಧ್ಯಮಗಳು ಇನ್ನು ಮುಂದೆ ವರದಿ ಮಾಡಬಹುದು ಎಂದು ದೆಹಲಿ ಹೈಕೋರ್ಟ್ ಶುಕ್ರವಾರ ಹೇಳಿದೆ.

ಡಿಸೆಂಬರ್ 16ರಂದು ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸುತ್ತಿರುವ ದೆಹಲಿ ತ್ವರಿತಗತಿ ನ್ಯಾಯಾಲಯ, ಈ ಸಂಬಂಧ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಿತ್ತು.

ಮಾಧ್ಯಮಗಳ ಮೇಲೆ ಹೇರಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಿರುವು ಹೈಕೋರ್ಟ್, ಮಾಧ್ಯಮಗಳು ಇನ್ನೂ ಮುಂದೆ ದೆಹಲಿ ಗ್ಯಾಂಗ್‌ರೇಪ್ ಪ್ರಕರಣದ ಬೆಳವಣಿಗೆಯ ಬಗ್ಗೆ ವರದಿ ಮಾಡಬಹುದಾಗಿದೆ. ಆದರೆ ಯುವತಿಯ ಹೆಸರು ಮತ್ತು ಅವರ ಕುಟುಂಬ ಸದಸ್ಯರ ಹೆಸರು ಯಾವುದೇ ಕಾರಣಕ್ಕೂ ಪ್ರಕಟಿಸಬಾರದು ಎಂದು ಆದೇಶಿಸಿದೆ.

ಡಿಸೆಂಬರ್ 16 ರಂದು ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ಆರು ಜನ ದುಷ್ಕರ್ಮಿಗಳು ಚಲಿಸುತ್ತಿದ್ದ ಬಸ್ಸಿನಲ್ಲಿ ಸಾಮೂಹಿಕ ಅತ್ಯಾಚಾರವೆಸಗಿ ಹಲ್ಲೆ ಮಾಡಿದ್ದರು. ಕೆಲವು ದಿನಗಳ ನಂತರ ಯುವತಿ ಸಾವನ್ನಪ್ಪಿದ್ದಳು. ಅತ್ಯಾಚಾರವೆಸಗಿದ್ದ ಆರು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ದೆಹಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಬಂಧಿತಾರಾಗಿದ್ದ ಆರೋಪಿಗಳಲ್ಲಿ ಓರ್ವ ಕಳೆದ ತಿಂಗಳು ತಿಹಾರ್ ಕೇಂದ್ರ ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement