ಯಡಿಯೂರಪ್ಪ-ಕಾಂಗ್ರೆಸ್ ಮಧ್ಯೆ ಒಳಒಪ್ಪಂದ: ಈಶ್ವರಪ್ಪ
ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಭರ್ಜರಿ ತಯಾರಿ ನಡೆಸಿದ್ದು, ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು..
ಮೈಸೂರು: ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಭರ್ಜರಿ ತಯಾರಿ ನಡೆಸಿದ್ದು, ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಪಕ್ಷದ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ್ದಾರೆ.
ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಸಿಎಂ ಶೆಟ್ಟರ್ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದರು. ಈ ವೇಳೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಅವರು ಇದ್ದರು.
ಈ ವೇಳೆ ಮಾತನಾಡಿದ ಕೆ.ಎಸ್. ಈಶ್ವರಪ್ಪ ಅವರು, ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಯಡಿಯೂರಪ್ಪ ಹಾಗೂ ಕಾಂಗ್ರೆಸ್ ಮಧ್ಯೆ ಒಳ ಒಪ್ಪಂದವಾಗಿದೆ. ಹೀಗಾಗಿಯೇ ಯಡಿಯೂರಪ್ಪ ಅವರು ಕೆಜೆಪಿಗೆ ವೋಟ್ ಕೊಡದಿದ್ದರೂ ಪರವಾಗಿಲ್ಲ ಕಾಂಗ್ರೆಸ್‌ಗೆ ಮತ ಹಾಕಿ ಎಂದು ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸದರು.
ಕಾಂಗ್ರೆಸ್ ಆಂಧ್ರಪ್ರದೇಶದ ಜಗನ್ಮೋಹನ್ ರೆಡ್ಡಿ ಅವರನ್ನು ತೋರಿಸಿ ಬಿಎಸ್‌ವೈಗೆ ಬ್ಲಾಕ್‌ಮೇಲ್ ಮಾಡುತ್ತಿದೆ. ಯಡಿಯೂರಪ್ಪ ಅವರು ಈ ಬ್ಲಾಕ್‌ಮೇಲ್‌ಗೆ ಹೆದರಿ ಕಾಂಗ್ರೆಸ್ ಪರ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುವುದಾಗಿ ಈಶ್ವರಪ್ಪ ಗುಡುಗಿದರು.