ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಂಜಯ್ ದತ್‌ ಇಂದು ಮರು ಪರಿಶೀಲನಾ ಅರ್ಜಿ ಸಲ್ಲಿಕೆ

1993ರ ಮುಂಬೈ ಸರಣಿ ಸ್ಫೋಟ ಪ್ರಕರಣ ಸಂಬಂಧ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಂಜಯ್ ದತ್ ..

Lingaraj Badiger
Updated On : 22 Mar 2013, 12:52 pm

ನವದೆಹಲಿ: 1993ರ ಮುಂಬೈ ಸರಣಿ ಸ್ಫೋಟ ಪ್ರಕರಣ ಸಂಬಂಧ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಲಿದ್ದಾರೆ.

ಒಂದು ವೇಳೆ ಸುಪ್ರೀಂ ಕೋರ್ಟ್‌ನಲ್ಲಿ ಮರು ಪರಿಶೀಲನಾ ಅರ್ಜಿ ವಜಾಗೊಂಡರೆ, ಈ ಪ್ರಕರಣ ಸಂಬಂಧ ಈಗಾಗಲೇ ಒಂದು ವರ್ಷ ಆರು ತಿಂಗಳು ಜೈಲಿನಲ್ಲಿ ಕಳೆದಿರುವ ಸಂಜಯ್ ದತ್ ಅವರು ಇನ್ನುಳಿದ ಮೂರು ವರ್ಷ ಆರು ತಿಂಗಳ ಜೈಲು ಶಿಕ್ಷೆ ಅನುಭವಿಸುವುದು ಅನಿವಾರ್ಯವಾಗಲಿದೆ.

ಟಾಡಾ ಕೋರ್ಟ್ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಖಾಯಂಗೊಳಿಸದ ಬಗ್ಗೆ ಪ್ರತಿಕ್ರಿಸಿದ ದತ್, ನನಗೆ ಇನ್ನು ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನನ್ನ ಕುಟುಂಬ ನನ್ನ ಜತೆ ಇರುವುದರಿಂದ ನಾನು ಇನ್ನು ದೃಡವಾಗಿದ್ದೇನೆ ಎಂದಿದ್ದಾರೆ.

ಟಾಡಾ ಕೋರ್ಟ್ ಸಂಜಯ್ ದತ್ ವಿರುದ್ಧ ಭಯೋತ್ಪಾದನೆ ಆರೋಪಗಳನ್ನು ಕೈ ಬಿಟ್ಟಿತ್ತು. ಇದನ್ನು ಎತ್ತಿಹಿಡಿದಿರುವ ಸುಪ್ರೀಂ ಕೋರ್ಟ್, ಸ್ಫೋಟದಲ್ಲಿ ಭಾಗಿಯಾಗದಿದ್ದರೂ, ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡಿದ್ದು ಮೊದಲ ತಪ್ಪು, ಜೊತೆಗೆ ಅವುಗಳನ್ನು ನಾಶಪಡಿಸಲು ಯತ್ನಿಸಿದ್ದು ಮತ್ತೊಂದು ತಪ್ಪು. ಹೀಗಾಗಿ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಪ್ರಕಾರ ಸಂಜಯ್ ದತ್ 5 ವರ್ಷ ಜೈಲು ಶಿಕ್ಷೆ ಅನುಭವಿಸಲೇಬೇಕು ಎಂದು ಸೂಚನೆ ನೀಡಿದೆ. ಇನ್ನು ನಾಲ್ಕು ವಾರಗಳಲ್ಲಿ ಶರಣಾಗುವಂತೆ ಆದೇಶ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement