ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕೇರಳ ರಾಜ್ಯಪಾಲರಾಗಿ ನಿಖಿಲ್ ಕುಮಾರ್ ಪ್ರಮಾಣ

Lingaraj Badiger
Updated On : 23 Mar 2013, 1:05 am

ತಿರುವನಂತಪುರಂ: ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ನಾಗಲ್ಯಾಂಡ್ ಮಾಜಿ ರಾಜ್ಯಪಾಲ ನಿಖಿಲ್ ಕುಮಾರ್ ಅವರು ಶನಿವಾರ ಕೇರಳದ 20ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಕೇರಳ ಮುಖ್ಯ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ್ ಅವರು ನಿಖಿಲ್ ಕುಮಾರ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಸಮಾರಂಭದಲ್ಲಿ ಕೇರಳ ಮುಖ್ಯಮಂತ್ರಿ ಓಮನ್ ಚಾಂಡಿ ಹಾಗೂ ಅವರ ಸಂಪುಟ ಸಹದ್ಯೋಗಿಗಳು ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳು ಭಾಗವಹಿಸಿದ್ದರು.

1963ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ 71 ವರ್ಷದ ಕುಮಾರ್ ಅವರು ದೆಹಲಿ ಪೊಲೀಸ್ ಆಯುಕ್ತ ಸೇರಿದಂತೆ ಹಲವು ಪ್ರಮುಖ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ ನಿವೃತ್ತಿಯ ಬಳಿಕ ರಾಜಕೀಯ ಪ್ರವೇಶ ಮಾಡಿದ ಕುಮಾರ್ ಅವರು ಬಿಹಾರದಿಂದ ಲೋಕಸಭಾ ಸದ್ಯಸರಾಗಿಯೂ ಆಯ್ಕೆಯಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement