ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ
ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಂಸದ ಪ್ರಹ್ಲಾದ್ ಜೋಶಿ ಅವರು ಶನಿವಾರ ಅಧಿಕಾರ ಸ್ವೀಕರಿಸಿದರು...
ಬೆಂಗಳೂರು: ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಂಸದ ಪ್ರಹ್ಲಾದ್ ಜೋಶಿ ಅವರು ಶನಿವಾರ ಅಧಿಕಾರ ಸ್ವೀಕರಿಸಿದರು.
ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಪಕ್ಷದ ಧ್ವಜ ಹಸ್ತಾಂತರಿಸುವ ಮೂಲಕ ಜೋಶಿ ಅವರಿಗೆ ಅಧಿಕಾರ ವಹಿಸಿಕೊಟ್ಟರು.
ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಹಿರಿಯ ನಾಯಕ ಅನಂತರ್ಕುಮಾರ್, ಉಪ ಮುಖ್ಯಮಂತ್ರಿ ಆರ್.ಅಶೋಕ್ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಉಪಸ್ಥಿತರಿದ್ದರು.