ಬಾಂಗ್ಲಾದಲ್ಲಿ ಚಂಡಮಾರುತ: 20 ಸಾವು
20 ಹಳ್ಳಿಗಳಿಗೆ ಚಂಡಮಾರುತ ಅಪ್ಪಳಿಸಿದ ಪರಿಣಾಮ 20 ಜನ ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಜನರು ಗಾಯಗೊಂಡಿರುವ...
ಢಾಕ: 20 ಹಳ್ಳಿಗಳಿಗೆ ಚಂಡಮಾರುತ ಅಪ್ಪಳಿಸಿದ ಪರಿಣಾಮ 20 ಜನ ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ ಪೂರ್ವ ಬಾಂಗ್ಲಾದೇಶದಲ್ಲಿ ಸಂಭವಿಸಿದೆ.
ಶುಕ್ರವಾರದಿಂದ ಬಾಂಗ್ಲಾದಲ್ಲಿ ಚಂಡಮಾರುತ ಅಪ್ಪಳಿಸುತ್ತಿದ್ದು, ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ. ಬಾಂಗ್ಲಾದೇಶದ ಆಗ್ನೆಯ ದಿಕ್ಕಿನಲ್ಲಿ ಚಂಡಮಾರುತ ಅಪ್ಪಳಿಸಿ, ಜನರ ಜೀವನ ಅಸ್ತವ್ಯಸ್ಥವಾಗಿದೆ.
ಚಂಡಮಾರುತದ ದಾಳಿಗೀಡಾಗಿರುವ 20 ಹಳ್ಳಿಗಳಲ್ಲಿ ಪ್ರವಾಹ ಉಕ್ಕಿ ಹರಿಯುತ್ತಿದ್ದು, ಜನರನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಂಡುಮಾರುತ ಅಪ್ಪಳಿಸಿದ ಪರಿಣಾಮ ಮನೆಗಳು, ಅಂಗಡಿಗಳು, ಕಟ್ಟಡಗಳು, ವಿದ್ಯುತ್ ಕಂಬಗಳು, ಮರಗಳು ನೆಲಸಮಗೊಂಡಿವೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.