ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮತ್ತೆ ನಿರಶನ ಆರಂಭಿಸಿದ ಕೇಜ್ರಿವಾಲ್

Mainashree
Updated On : 23 Mar 2013, 1:19 am

ನವದೆಹಲಿ: ನೀರು ಮತ್ತು ವಿದ್ಯುತ್ ಬೆಲೆ ಏರಿಕೆಯನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ರಾಜ್‌ಘಾಟ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.

ಈ ವೇಳೆ ಮಾತನಾಡಿದ ಕೇಜ್ರಿವಾಲ್, ಭ್ರಷ್ಟಾಚಾರದಿಂದಾಗಿ ಸಾಮಾನ್ಯ ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಭ್ರಷ್ಟಾಚಾರದಿಂದಲೇ ದೆಹಲಿಯಲ್ಲಿ ವಿದ್ಯುತ್ ಮತ್ತು ನೀರಿನ ಬೆಲೆ ಹೆಚ್ಚಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಬೆಲೆ ಕಡಿತಗೊಳಿಸಲು ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಲಾಯಿತು. ಆದರೆ ಸರ್ಕಾರ ತಮ್ಮ ಮನವಿಗೆ ಸ್ಪಂದಿಸದೇ ಭ್ರಷ್ಟಾಚಾರದಲ್ಲಿ ನಿರತವಾಗಿದೆ ಎಂದು ಕೇಜ್ರಿವಾಲ್ ದೂರಿದ್ದಾರೆ.

ಬ್ರಿಟಿಷ್ ಸರ್ಕಾರಕ್ಕಿಂತಲೂ ಕಾಂಗ್ರೆಸ್ ನೇತೃತ್ವದ ದೆಹಲಿ ಸರ್ಕಾರ ಕೀಳು ಎಂದಿರುವ ಅವರು, ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ವಿರುದ್ಧ ಕಿಡಿಕಾರಿದ್ದಾರೆ.

ವಿದ್ಯುತ್ ಮತ್ತು ನೀರು ಸರಬರಾಜು ಕಂಪನಿಗಳೊಡನೆ ಶೀಲಾ ದಿಕ್ಷಿತ್ ಹಣ ಪಡೆದು ಒಪ್ಪಂದ ಮಾಡಿಕೊಂಡಿದ್ದಾರೆ. ಅದಕ್ಕಾಗಿಯೇ ದೀಕ್ಷಿತ್ ಕಂಪನಿಗಳಿಗೆ ಕಳೆದ ಎರಡು ವರ್ಷಗಳಿಂದ 20,000 ಕೋಟಿ ನಷ್ಟವಾಗಿದೆ ಎಂದು ಹೇಳಿ ಬೆಲೆ ಏರಿಕೆ ಮಾಡಿದ್ದಾರೆ ಎಂದು ಆಪಾದಿಸಿದರು.

ದೆಹಲಿ ಸರ್ಕಾರ ಕೂಡಲೇ ಬೆಲೆ ಏರಿಕೆಯನ್ನು ಕಡಿತಗೊಳಿಸಬೇಕು, ಇಲ್ಲವಾದಲ್ಲಿ ನಿರಶನ ಮುಂದುವರೆಸುವುದಾಗಿ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement