ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಾಪ್ಟರ್ ಖರೀದಿಯಲ್ಲಿ ಅಕ್ರಮ ನಡೆದಿದೆ: ಆಂಟನಿ

ವಿವಿಐಪಿ ಹೆಲಿಕಾಪ್ಟರ್ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ರಕ್ಷಣಾ ಸಚಿವ ಎ.ಕೆ.ಆಂಟನಿ ಅವರು ಸೋಮವಾರ ಖಚಿತಪಡಿಸಿದ್ದಾರೆ.

Lingaraj Badiger
Updated On : 25 Mar 2013, 2:13 am

ಕೊಚ್ಚಿ: ವಿವಿಐಪಿ ಹೆಲಿಕಾಪ್ಟರ್ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ರಕ್ಷಣಾ ಸಚಿವ ಎ.ಕೆ.ಆಂಟನಿ ಅವರು ಸೋಮವಾರ ಖಚಿತಪಡಿಸಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಇಂತಹ ಅಕ್ರಮ ತಡೆಯಲು ಹೊಸ ಸೇನಾ ಶಸ್ತ್ರಾಸ್ತ್ರ ಖರೀದ ನೀತಿ ಜಾರಿಗೆ ತರುವುದಾಗಿ ಹೇಳಿದ್ದಾರೆ.

'ಹೌದು, ಹೆಲಿಕಾಪ್ಟರ್ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಮತ್ತು ಈ ಸಂಬಂಧ ಲಂಚ ಪಡೆಯಲಾಗಿದ್ದು, ಸಿಬಿಐ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಆಂಟನಿ ವರದಿಗಾರರಿಗೆ ತಿಳಿಸಿದ್ದಾರೆ.

'ದಯವಿಟ್ಟು ಇನ್ನು ಸ್ವಲ್ಪ ದಿನ ಕಾಯಿರಿ, ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದರ ಬಗ್ಗೆ ಯಾವುದೇ ಅನುಮಾನ ಬೇಡ' ಎಂದಿರುವ ಆಂಟಿನಿ, ಶೀಘ್ರದಲ್ಲೇ ಹೊಸ ಸೇನಾ ಶಸ್ತ್ರಾಸ್ತ್ರ ಖರೀದ ನೀತಿ ಘೋಷಿಸುವುದಾಗಿ ತಿಳಿಸಿದರು.

ಇಟಲಿಯ ಆಗಸ್ಟ್ ವೆಸ್ಟ್‌ಲ್ಯಾಂಡ್ ಕಂಪನಿಯಿಂದ 12 ವಿವಿಐಪಿ ಹೆಲಿಕಾಪ್ಟರ್ ಖರೀದಿ ಒಪ್ಪಂದದಲ್ಲಿ ಭಾರತೀಯ ಮಧ್ಯವರ್ತಿ 3,700ಕೋಟಿ ರುಪಾಯಿ ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದ ತಕ್ಷಣವೇ ಆಂಟನಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement