ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮಾ.30ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಚಿ ಬಿಡುಗಡೆ: ಪರಮೇಶ್ವರ್

ಮಾರ್ಚ್ 30ಕ್ಕೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ನಮ್ಮ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ..

Lingaraj Badiger
Updated On : 25 Mar 2013, 3:32 am

ನವದೆಹಲಿ: ಮಾರ್ಚ್ 30ಕ್ಕೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ನಮ್ಮ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ(ಕೆಪಿಸಿಸಿ) ಡಾ.ಜಿ.ಪರಮೇಶ್ವರ್ ಅವರು ಸೋಮವಾರ ಹೇಳಿದ್ದಾರೆ.

ಈ ಸಂಬಂಧ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಭ್ರಷ್ಟಾಚಾರ, ಕ್ರಿಮಿನಲ್ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅನ್ಯ ಪಕ್ಷದ ಕೆಲವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಹೈಕಮಾಂಡ್ ಒಪ್ಪಿಗೆ ನೀಡಿದೆ. ಆದರೂ ಸೇರ್ಪಡೆಯ ನಂತರದ ಪರಿಣಾಮದ ಬಗ್ಗೆ ಚಿಂತಿಸುತ್ತಿದ್ದೇವೆ. ಈ ಬಗ್ಗೆ ರಾಜ್ಯದ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿ, ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪರಮೇಶ್ವರ್ ತಿಳಿಸಿದ್ದಾರೆ.

ಇದೇ ವೇಳೆ ಮೊದಲ ಪಟ್ಟಿಯಲ್ಲಿ ಅನ್ಯ ಪಕ್ಷದಿಂದ ಬಂದ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement