ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಗ್ನಿ ಅನಾಹುತ: ತನಿಖೆಗೆ 2 ತಂಡ ರಚನೆ; ಬಚ್ಚೇಗೌಡ

ಬೆಂಗಳೂರಿನಲ್ಲಿ ನಿನ್ನೆ ಸಂಭವಿಸಿದ್ದ ಅಗ್ನಿ ಅನಾಹುತ ಪ್ರಕರಣದ ತನಿಖೆಗೆ ಎರಡು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ ಎಂದು ಕಾರ್ಮಿಕ ಸಚಿವ ..

Lingaraj Badiger
Updated On : 26 Mar 2013, 11:51 am

ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ಸಂಭವಿಸಿದ್ದ ಅಗ್ನಿ ಅನಾಹುತ ಪ್ರಕರಣದ ತನಿಖೆಗೆ ಎರಡು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ ಎಂದು ಕಾರ್ಮಿಕ ಸಚಿವ ಬಚ್ಚೇಗೌಡ ಅವರು ಮಂಗಳವಾರ ಹೇಳಿದ್ದಾರೆ.

ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನಾ ಸಂಬಂಧ ತನಿಖೆಗೆ ಎರಡು ಪತ್ಯೇಕ ತಂಡಗಳನ್ನು ರಚಿಸಲಾಗಿದ್ದು, ತನಿಖೆಯ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು.

6 ಕಾರ್ಮಿಕರ ಮರಣೋತ್ತರ ಪರೀಕ್ಷೆ ಬಳಿಕ ಶವಗಳನ್ನು ವಿಮಾನದ ಮೂಲಕ ಉತ್ತರ ಪ್ರದೇಶದ ಅವರ ಸ್ವಗ್ರಾಮಕ್ಕೆ ಕಳುಹಿಸಿಕೊಡಲಾಗುವುದು ಎಂದು ಬಚ್ಚೇಗೌಡ ಅವರು ಹೇಳಿದರು.

ಮಾಗಡಿ ರಸ್ತೆಯ ಕಬ್ಬಿಗೆರೆ ಸಮೀಪದ ಸೀಗೆಹಳ್ಳಿ ತಿರುವಿನ ಬಳಿ ಇರುವ ಎಸ್.ಆರ್.ಸೀಟಿಂಗ್ಸ್ ಎಂಬ ಕಂಪನಿಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ್ದ ಭಾರಿ ಅಗ್ನಿ ಅನಾಹುತದಲ್ಲಿ ಆರು ಮಂದಿ ಕಾರ್ಮಿಕರು ಸಜೀವ ದಹನವಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement