ವಿಧಾನಸಭೆ ಚುನಾವಣೆ ಹಿನ್ನೆಲೆ, ಬೆಂಗಳೂರಿನ ಐಪಿಎಲ್ ಪಂದ್ಯ ರದ್ದು
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 4ರಂದು ಬೆಂಗಳರಿನಲ್ಲಿ ನಡೆಯಬೇಕಿದ್ದ ಪಂದ್ಯವನ್ನು ರದ್ದುಗೊಳಿಸಲಾಗಿದೆ ..
ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 4ರಂದು ಬೆಂಗಳರಿನಲ್ಲಿ ನಡೆಯಬೇಕಿದ್ದ ಪಂದ್ಯವನ್ನು ರದ್ದುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಜ್ಯೋತಿಪ್ರಕಾಶ್ ಮಿರ್ಚಿ ಅವರು ಮಂಗಳವಾರ ಹೇಳಿದ್ದಾರೆ.
ಮೇ 5ರಂದು ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಭದ್ರತಾ ದೃಷ್ಟಿಯಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೇ 4ಕ್ಕೆ ನಿಗದಿಯಾಗಿದ್ದ ಪಂಜಾಬ್-ಆರ್ಸಿಬಿ ನಡುವಿನ ಪಂದ್ಯವನ್ನು ರದ್ದು ಮಾಡಲಾಗಿದೆ ಎಂದು ಮಿರ್ಚಿ ತಿಳಿಸಿದ್ದಾರೆ.