ಕೈ' ಟಿಕೆಟ್ಗಾಗಿ ಕಾರ್ಯಕರ್ತರ ಘರ್ಷಣೆ
ಕೋಲಾರ: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗುತ್ತಿದ್ದು, ಒಳಗಣ ಜಗಳ ಹೆಚ್ಚಾಗಿದೆ.
ಮಂಗಳವಾರ ಟಿಕೆಟ್ ಹಂಚಿಕೆ ವಿಚಾರದಲ್ಲಿ ಸಿಡಿದೆದ್ದಿರುವ ಕಾಂಗ್ರೆಸ್ ಕಾರ್ಯಕರ್ತರ ನಡುವಣ ಘರ್ಷಣೆ ಹೆಚ್ಚಾಗಿದೆ. ಟಿಕೆಟ್ ನೀಡುವ ವಿಚಾರದಲ್ಲಿ ಸಚಿವ ಮುನಿಯಪ್ಪ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಮುಳಬಾಗಿಲು ಶಾಸಕ ಅಮರೇಶ್ಗೆ ಟಿಕೆಟ್ ನೀಡದಂತೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಮುಖಂಡರು ಸರಿಯಾದ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ.