ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಿಎಸ್‌ಪಿ ಮುಖಂಡನ ಹತ್ಯೆ ಪ್ರಕರಣ: ಆರೋಪಿಗಳು ಬಳಸಿದ ಕಾರು ವಶ

Mainashree
Updated On : 27 Mar 2013, 7:13 am

ನವದೆಹಲಿ: ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖಂಡ ದೀಪಕ್ ಭಾರಧ್ವಜ್ ಅವರ ಫಾರ್ಮ್‌ಹೌಸ್‌ಗೆ ಬಂದಿದ್ದ ಸ್ಕೋಡಾ ಕಾರನ್ನು ಪೊಲೀಸರು ಬುಧವಾರ ವಶಪಡಿಸಿಕೊಂಡಿದ್ದಾರೆ.

ನಿತೇಶ್ ಕುಂಜ್ ಫಾರ್ಮ್‌ಹೌಸ್‌ನಲ್ಲಿ ದೀಪಕ್ ಅವರನ್ನು ಕೊಂದು ಇಬ್ಬರು ದುಷ್ಕರ್ಮಿಗಳು ಪರಾರಿಯಾಗಲು ಯತ್ನಿಸಿದ ಸ್ಕೋಡಾ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹರಿಯಾಣದ ಜಿಂದ್ ಎಂಬಲ್ಲಿ ಕಾರನ್ನು ವಶಪಡಿಸಿಕೊಂಡಿದ್ದು, ಮೂರು ಜನ ಆರೋಪಿಗಳನ್ನು ಗುರುತಿಸಲಾಗಿದು, ಈ ಆರೋಪಿಗಳು ದೆಹಲಿ ಹರಿಯಾಣದ ಗಡಿಭಾಗದಲ್ಲಿರುವ ಪೂತ್ ಖುರ್ಡ್‌ನ ಕೆಹ್ರಾ ಎಂಬ ಹಳ್ಳಿಯವರು ಎಂದು ತಿಳಿದು ಬಂದಿದೆ.

ಇನ್ನುಳಿದ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚನೆ ಮಾಡಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement