ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಶೆಟ್ಟರ್ ಸಂಪುಟದಿಂದ ರೇಣು ವಜಾ

ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರ ವಿರುದ್ಧ ಲಂಚ ಆರೋಪ ಮಾಡಿ, ಪಕ್ಷದಿಂದ ಉಚ್ಚಾಟನೆಗೊಂಡಿದ್ದ ಅಬಕಾರಿ ಸಚಿವ..

Lingaraj Badiger
Updated On : 27 Mar 2013, 11:18 am

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರ ವಿರುದ್ಧ ಲಂಚ ಆರೋಪ ಮಾಡಿ, ಪಕ್ಷದಿಂದ ಉಚ್ಚಾಟನೆಗೊಂಡಿದ್ದ ಅಬಕಾರಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರನ್ನು ಸಚಿವ ಸಂಪುಟದಿಂದ ಬುಧವಾರ ವಜಾಗೊಳಿಸಲಾಗಿದೆ.

ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ರೇಣುಕಾಚಾರ್ಯ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರಿಗೆ ಶಿಫಾರಸು ಮಾಡಿದ್ದಾರೆ.

ಸದಾನಂದಗೌಡ ಅವರ ವಿರುದ್ಧ ಭ್ರಷ್ಟಾಚಾರ ಅರೋಪ ಮಾಡಿದ್ದಲ್ಲದೇ, ಅವರು ಸಿಎಂ ಆಗಿದ್ದಾಗ ನಾನೇ ಅವರಿಗೆ ಹಣ ಕೊಟ್ಟಿದ್ದೆ ಎಂದು ನಿನ್ನೆ ರೇಣುಕಾಚಾರ್ಯ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷ ವಿರೋಧಿ ಆರೋಪದ ಮೇಲೆ ಪಕ್ಷದಿಂದ ಉಚ್ಚಾಟಿಸಲಾಗಿದ್ದು, ಇಂದು ಸಚಿವ ಸಂಪುಟದಿಂದಲೂ ವಜಾಗೊಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement