ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸೂರ್ಯನೆಲ್ಲಿ ಪ್ರಕರಣ: ಕುರಿಯನ್‌ಗೆ ನೋಟೀಸ್

Mainashree
Updated On : 27 Mar 2013, 7:14 am

ನವದೆಹಲಿ: ಸೂರ್ಯನೆಲ್ಲಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಸೆಷನ್ ನ್ಯಾಯಾಲಯ ರಾಜ್ಯಸಭಾ ಉಪಸಭಾಪತಿ ಪಿ.ಜೆ ಕುರಿಯನ್ ಸೇರಿದಂತೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಮಂಗಳವಾರ ನೋಟೀಸ್ ನೀಡಿದೆ.

ಅತ್ಯಾಚಾರ ಪ್ರಕರಣದಲ್ಲಿ ಕುರಿಯನ್ ಸೇರಿದಂತೆ ಇನ್ನೂ ನಾಲ್ವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಅತ್ಯಾಚಾರಕ್ಕೀಡಾದ ಯುವತಿ ದೂರು ನೀಡಿದ್ದರು. ಆದರೆ ಪ್ರಥಮ ದರ್ಜೆ ನ್ಯಾಯಾಲಯ ದೂರನ್ನು ರದ್ದುಗೊಳಿಸಿತ್ತು.

ಇದನ್ನು ಪ್ರಶ್ನಿಸಿ ಯುವತಿ ಸೆಷನ್ ನ್ಯಾಯಾಲಯದ ಮೆಟ್ಟಿಲೇರಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡ ನ್ಯಾಯಾಲಯ ಕುರಿಯನ್ ಸೇರಿದಂತೆ ನಾಲ್ವರಿಗೆ ನೋಟೀಸ್ ಜಾರಿ ಮಾಡಿದ್ದು, ಮೇ 29ರಂದು ವಿಚಾರಣೆ ನಡೆಸಲಿದೆ.

ಅತ್ಯಾಚಾರಕ್ಕೊಳಗಾದ ಯುವತಿ ಕಳೆದ ತಿಂಗಳು ರಾಜ್ಯಸಭಾ ಉಪಸಭಾಪತಿ ಪಿ.ಜೆ ಕುರಿಯನ್ ಅವರ ವಿರುದ್ಧ ಚಿಂಗವಾನಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ಇನ್ನಿತರ ಆರೋಪಿಗಳಾದ ಧರ್ಮರಾಜನ್, ಉನ್ನಿಕೃಷ್ಣನ್ ಮತ್ತು ಜಮಾಲ್ ವಿರುದ್ಧವೂ ದೂರು ದಾಖಲಿಸಿ ತನಿಖೆ ನಡೆಸುವಂತೆ ಮನವಿ ಮಾಡಿದ್ದುರು. ಆದರೆ ಪ್ರಥಮ ದರ್ಜೆ ನ್ಯಾಯಾಲಯ ದೂರನ್ನು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಯುವತಿ ಕೋರ್ಟ್ ಮೆಟ್ಟಿಲೇರಿದ್ದರು.

1996ರಲ್ಲಿ ನಡೆದ ಸೂರ್ಯನೆಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ 35 ಆರೋಪಿಗಳನ್ನು ಹೈಕೋರ್ಟ್ ಖುಲಾಸೆಗೊಳಿಸಿತ್ತು. ಕೇರಳದ ಸೂರ್ಯನೆಲ್ಲಿಯ 16ವರ್ಷದ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಸತತ 40ದಿನಗಳ ವರೆಗೆ, 42ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಪ್ರಕರಣದ ಆರೋಪಿಗಳನ್ನು ಖುಲಾಸೆಗೊಳಿಸಿದ್ದ ಹೈಕೋರ್ಟ್, ವೇಶ್ಯಾ ವೃತ್ತಿಗೆ ಮಹಿಳೆಯರನ್ನು ದೂಡುತ್ತಿದ್ದ ಆರೋಪದ ಮೇಲೆ ಒಬ್ಬ ವ್ಯಕ್ತಿಗೆ ಮಾತ್ರ ಐದು ವರ್ಷಗಳ ಸಜೆ ವಿಧಿಸಿತ್ತು. ಆಮೇಲೆ ಈ ಪ್ರಕರಣವನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಪ್ರಕರಣವನ್ನು ಮೊದಲಿನಿಂದ ವಿಚಾರಣೆ ನಡೆಸುವಂತೆ ಹೈಕೋರ್ಟ್‌ಗೆ ಆದೇಶಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement