ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಪಿತೂರಿಯಿಂದ ಬಿಎಸ್‌ಪಿ ನಾಯಕನ ಹತ್ಯೆ

Mainashree
Updated On : 28 Mar 2013, 4:52 am

ನವದೆಹಲಿ: ಬಹುಜನ ಸಮಾಜ ಪಕ್ಷದ ನಾಯಕ ದೀಪಕ್ ಭಾರದ್ವಜ್ ಕೊಲೆ ಒಂದು ಪಿತೂರಿ ಎಂದು ಪೊಲೀಸ್ ಮೂಲಗಳು ಗುರುವಾರ ತಿಳಿಸಿದೆ.

ದೀಪಕ್ ಕೊಲೆಗೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು, ದೀಪಕ್ ಅವರನ್ನು ಒಳಸಂಚಿನಿಂದ ಹತ್ಯೆಮಾಡಲಾಗಿದೆ ಎಂದು ಹೇಳಿದ್ದಾರೆ.

ಆಸ್ತಿ ಮತ್ತು ಹಣಕ್ಕೆ ಸಂಬಂಧಿಸಿದಂತೆ ದೀಪಕ್ ಅವರನ್ನು ಸುಪಾರಿ ನೀಡಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಧಿಕರು ಅಥವಾ ವ್ಯಾಪಾರದ ಪ್ರತಿಸ್ಪರ್ಧಿಗಳು ಸುಪಾರಿ ನೀಡಿರಬಹುದು ಎಂದು ಶಂಕಿಸಲಾಗಿದ್ದು, ಈ ಬಗ್ಗೆ ವಿಚಾರಣೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಧಿಸಿದಂತೆ ಪೊಲೀಸರು 8 ಜನರನ್ನು ಬಂಧಿಸಿದ್ದು, ದೀಪಕ್ ಪತ್ನಿ ಮತ್ತು ಮಗ ಸೇರಿದಂತೆ 20 ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಗಂಡ-ಹೆಂಡತಿ ಮಧ್ಯೆ ಕಲಹ ಉಂಟಾಗಿ, ದೀಪಕ್ ಅವರನ್ನು ತೊರೆದು ಪತ್ನಿ ಕಳೆದ ಹಲವು ತಿಂಗಳಿನಿಂದ ಚಿಕ್ಕ ಮಗ ನಿತೀಶ್ ಎಂಬುವವರ ಮನೆಯಲ್ಲಿ ವಾಸವಿದ್ದರು. ಇದಲ್ಲದೇ ಮಗ ನಿತೀಶ್ ತಂದೆಯ ವಿರುದ್ಧ ಕೆಲವು ತಿಂಗಳ ಹಿಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೀಪಕ್ ಅವರು ಮಗನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ಪತ್ನಿ ಮತ್ತು ಮಗನನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ಮಂಗಳವಾರ ನಿತೇಶ್ ಕುಂಜ್ ಫಾರ್ಮ್‌ಹೌಸ್‌ನಲ್ಲಿ 62 ವರ್ಷದ ಬಿಎಸ್‌ಪಿ ನಾಯಕ ದೀಪಕ್ ಭಾರದ್ವಜ್ ಅವರನ್ನು ಅಪರಿಚಿತ ವ್ಯಕ್ತಿಗಳು ಶೂಟ್ ಮಾಡಿ ಪರಾರಿಯಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement