ರಘುಪತಿ ರಾಸಲೀಲೆ ಸಿಡಿ ಬಹಿರಂಗ: ಚುನಾವಣೆಯಿಂದ ಔಟ್
ಯುವತಿಯೊಬ್ಬಳೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿರುವ ಸಿಡಿ ಮಾಧ್ಯಮಗಳಿಗೆ ಬಿಡುಗಡೆಯಾಗಿ ವಿವಾದ ಸೃಷ್ಟಿಸಿದ ಹಿನ್ನೆಲೆಯಲ್ಲಿ ಉಡುಪಿ ಬಿಜೆಪಿ ..
ಬೆಂಗಳೂರು: ಯುವತಿಯೊಬ್ಬಳೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿರುವ ಸಿಡಿ ಮಾಧ್ಯಮಗಳಿಗೆ ಬಿಡುಗಡೆಯಾಗಿ ವಿವಾದ ಸೃಷ್ಟಿಸಿದ ಹಿನ್ನೆಲೆಯಲ್ಲಿ ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಅವರನ್ನು ವಿಧಾನಸಭೆ ಚುನಾವಣೆಯಿಂದ ಹೊರ ಹಾಕಲಾಗಿದೆ.
ಈ ಬಗ್ಗೆ ಇಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ರಘುಪತಿ ಭಟ್, ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ಆಗುವ ಮುಜುಗರ ತಪ್ಪಿಸುವ ಉದ್ದೇಶದಿಂದ ತಾವು ಈ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ಹೇಳಿದ್ದಾರೆ.
ಇನ್ನು ರಾಸಲೀಲೆ ಸಿಡಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದು ತಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತರ ಎಂದು ಆರೋಪಿಸಿದ್ದಾರೆ. ಅಲ್ಲದೆ ಈ ಸಿಡಿ ಇಂದು ಬೆಳಗ್ಗೆಯಷ್ಟೇ ತಮ್ಮ ಕೈಗೆ ಲಭ್ಯವಾಗಿದ್ದು, ಅದನ್ನು ನೋಡಿ ನನಗೆ ದಿಗ್ಭ್ರಮೆಯಾಗಿದೆ. ಅದರಲ್ಲಿರುವ ವ್ಯಕ್ತಿ ಖಂಡಿತ ನಾನಲ್ಲ. ಘಟನೆಯಿಂದ ನನಗೆ ತುಂಬಾ ನೋವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಯಲಿ ಎಂದಿದ್ದಾರೆ.
ಮಾಧ್ಯಮಗಳಿಗೆ ಲಭ್ಯವಾದ ರಘುಪತಿ ಭಟ್ ಅವರ ರಾಸಲೀಲೆ ಸಿಡಿಯ ದೃಶ್ಯಗಳನ್ನು ನೋಡಿದಾಗ, ಇದು ಪರಸ್ಪರ ಒಪ್ಪಿಗೆಯೊಂದಿಗೆ ನಡೆದ ಲೈಂಗಿಕ ಕ್ರಿಯೆ ಎಂಬುದು ಸ್ಪಷ್ಟವಾಗುತ್ತದೆ. ಆದರೆ ಈ ಸಿಡಿಯ ದೃಶ್ಯಗಳು ಪ್ರಸಾರ ಮಾಡಲು ಸಾಧ್ಯವಿಲ್ಲದಷ್ಟು ಅಶ್ಲೀಲವಾಗಿವೆ. ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಯಾವುದೇ ದೂರು ಕೂಡ ದಾಖಲಾಗಿಲ್ಲ.
ಈಗಾಗಲೇ ಬ್ಲೂಫಿಲಂ ಕುಖ್ಯಾತಿಗೆ ಕಾರಣವಾಗಿದ್ದ ಬಿಜೆಪಿಗೆ ಈಗ ಚುನಾವಣಾ ಸಂರ್ದಭದಲ್ಲಿ ಈ ಹಗರಣ ಹೊರ ಬಂದಿರುವುದು ಬಿಜೆಪಿ ಸರ್ಕಾರ ತೀವ್ರ ಮುಜುಗರ ಅನುಭವಿಸುವಂತಾಗಿದೆ.