ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಚಾಮುಂಡೇಶ್ವರಿ ಕ್ಷೇತ್ರದಿಂದ ಅಂಬಿ ಸ್ಪರ್ಧೆ?

ಮಂಡ್ಯದಿಂದ ಸ್ಪರ್ಧಿಸಲು ನಟ ಅಂಬರೀಷ್ ಅವರಿಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಅದಕ್ಕೆ ಪರ್ಯಾಯವಾಗಿ ಅಂಬರೀಷ್ ..

Lingaraj Badiger
Updated On : 30 Mar 2013, 1:26 am

ನವದೆಹಲಿ: ಮಂಡ್ಯದಿಂದ ಸ್ಪರ್ಧಿಸಲು ನಟ ಅಂಬರೀಷ್ ಅವರಿಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಅದಕ್ಕೆ ಪರ್ಯಾಯವಾಗಿ ಅಂಬರೀಷ್ ಅವರನ್ನು ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ವರಿಷ್ಠರು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಒಕ್ಕಲಿಗರು ಪ್ರಾಬಲ್ಯವಿರುವುದರಿಂದ ಅಲ್ಲಿ ಒಕ್ಕಲಿಗ ಅಭ್ಯರ್ಥಿಯನ್ನೇ ಕಣಕ್ಕಿಳಿಸಿಲು ಕಾಂಗ್ರೆಸ್ ಮುಂದಾಗಿದೆ. ಇದರಿಂದ ಚಾಮುಂಡೇಶ್ವರಿ ಕ್ಷೇತ್ರದ ಹಾಲಿ ಶಾಸಕ ಸತ್ಯನಾರಾಯಣ ಅವರ ಸ್ಥಿತಿ ಅತಂತ್ರವಾಗಿದೆ.

ಒಂದು ವೇಳೆ ಅಂಬರೀಷ್ ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾದಲ್ಲಿ, ಜೆಡಿಎಸ್‌ನ ಜಿ.ಟಿ.ದೇವೇಗೌಡ ಹಾಗೂ ಅಂಬಿ ನಡುವೆ ನೇರ ಸ್ಪರ್ಧೆ ಏರ್ಪಡಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement