ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಜೆಡಿಎಸ್-ಬಿಎಸ್‌ಆರ್ ಕಾಂಗ್ರೆಸ್ ಮೈತ್ರಿ?

ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಎಸ್‌ಆರ್ ಕಾಂಗ್ರೆಸ್ ಒಂದಾಗಲಿದೆ. ಈ ಬಗ್ಗೆ ಸ್ವತಃ ಬಿಎಸ್‌ಆರ್ ಕಾಂಗ್ರೆಸ್ ಮುಖ್ಯಸ್ಥ..

Lingaraj Badiger
Updated On : 30 Mar 2013, 7:14 am

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಎಸ್‌ಆರ್ ಕಾಂಗ್ರೆಸ್ ಹೊಂದಾಗಲಿವೆ. ಈ ಬಗ್ಗೆ ಸ್ವತಃ ಬಿಎಸ್‌ಆರ್ ಕಾಂಗ್ರೆಸ್ ಮುಖ್ಯಸ್ಥ ಬಿ.ಶ್ರೀರಾಮುಲು ಅವರೇ ಶನಿವಾರ ಸುಳಿವು ನೀಡಿದ್ದಾರೆ.

ಈ ಬಗ್ಗೆ ಸುವರ್ಣನ್ಯೂಸ್‌ಗೆ ಮಾತನಾಡಿರುವ ಶ್ರೀರಾಮುಲು, ನಮ್ಮದು ಸಮಾನ ಮನಸ್ಕ ಪ್ರಾದೇಶಿಕ ಪಕ್ಷ, ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ತಾವು ದೂರವಿದ್ದು, ಜೆಡಿಎಸ್‌ನೊಂದಿಗೆ ಮೈತ್ರಿ ಮಾತುಕತೆ ನಡೆಯುತ್ತಿದೆ ಎಂದಿದ್ದಾರೆ.

ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದರೆ ಇನ್ನು ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ರಾಮುಲು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement