ಬೇಣಿ ಪ್ರಸಾದ್ ವಜಾಕ್ಕೆ ಎಸ್‌ಪಿ ಆಗ್ರಹ
ಕೇಂದ್ರ ಸಚಿವ ಬೇಣಿ ಪ್ರಸಾದ್ ವರ್ಮಾ ಹಾಗೂ ಸಮಾಜವಾದಿ ಪಕ್ಷ(ಎಸ್‌ಪಿ)ದ ನಡುವಿನ ಮಾತಿನ ಚಕಮಕಿ ಮುಂದುವರೆದಿದ್ದು, ಇಂದು ಮತ್ತೆ ಮುಲಾಯಂ ಸಿಂಗ್..
ಲಖನೌ/ನವದೆಹಲಿ: ಕೇಂದ್ರ ಸಚಿವ ಬೇಣಿ ಪ್ರಸಾದ್ ವರ್ಮಾ ಹಾಗೂ ಸಮಾಜವಾದಿ ಪಕ್ಷ(ಎಸ್‌ಪಿ)ದ ನಡುವಿನ ಮಾತಿನ ಚಕಮಕಿ ಮುಂದುವರೆದಿದ್ದು, ಇಂದು ಮತ್ತೆ ಮುಲಾಯಂ ಸಿಂಗ್ ನೇತೃತ್ವದ ಎಸ್‌ಪಿ ವಿರುದ್ಧ ವಾಗ್ದಾಳಿ ನಡೆಸಿರುವ ಬೇಣಿ ಪ್ರಸಾದ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಎಸ್‌ಪಿ ಆಗ್ರಹಿಸಿದೆ.
ಬೇಣಿ ಹೇಳಿಕೆಗೆ ತೀಕ್ಷಣವಾಗಿ ಪ್ರತಿಕ್ರಿಯಿಸಿರುವ ಎಸ್‌ಪಿ, ಇಂತಹ ಆಧಾರ ರಹಿತ ಹೇಳಿಕೆಗಳಿಂದ ಕಾಂಗ್ರೆಸ್ ವ್ಯತೆಪಡಬೇಕಾಗುತ್ತದೆ ಎಂದು ಎಚ್ಚರಿಸಿದೆ ಮತ್ತು ಈ ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಯಾವ್ಯಾವ ಪಕ್ಷಗಳು ಎಷ್ಟೆಷ್ಟು ಸೀಟುಗಳನ್ನು ಗೆಲ್ಲಬಹುದು ಎಂಬ ಪ್ರಶ್ನೆಗೆ ಉತ್ತರಿಸಿದ್ದ ಬೇಣಿ, ಉತ್ತರ ಪ್ರದೇಶದ 80 ಲೋಕಸಭಾ ಸೀಟುಗಳಲ್ಲಿ ಕಾಂಗ್ರೆಸ್ 40 ಸೀಟುಗಳನ್ನು ಗೆಲ್ಲಲಿದೆ. ಅದೇ ವೇಳೆ ಬಿಜೆಪಿಗೆ 10 ಸೀಟಿಗಿಂತ ಹೆಚ್ಚು ಗೆಲ್ಲಲು ನಾವು ಅವಕಾಶ ಕೊಡುವುದಿಲ್ಲ. ಬೆಹೆನ್‌ಜೀ (ಮಾಯಾವತಿ) 36 ಸೀಟುಗಳನ್ನು ಗೆಲ್ಲುತ್ತಾರೆ. ಆದರೆ ಸಮಾಜವಾದಿ ಪಕ್ಷ ಕೇವಲ 4 ಸೀಟುಗಳನ್ನು ಗೆದ್ದು, ಪಕ್ಷದ ಅಂತಿಮ ಯಾತ್ರೆ ನಡೆಸಲಿದೆ ಎಂದು ಹೇಳಿದ್ದರು.