ಮುರುಗೇಶ ನಿರಾಣಿ ವಿರುದ್ಧ ಸ್ಪರ್ಧೆಗೆ ಸಿದ್ಧ: ಹನುಮಂತ ನಿರಾಣಿ
ಸಚಿವ ಮುರುಗೇಶ್ ನಿರಾಣಿ ಅವರು ಕೆಜೆಪಿ ಸೇರುವುದು ಬಹುತೇಕ ಖಚಿತವಾಗಿದ್ದು, ಬಿಜೆಪಿಯಿಂದ ಟಿಕೆಟ್ ನೀಡಿದರೆ ಅವರ ವಿರುದ್ಧವೇ..
ಬೆಂಗಳೂರು: ಸಚಿವ ಮುರುಗೇಶ್ ನಿರಾಣಿ ಅವರು ಕೆಜೆಪಿ ಸೇರುವುದು ಬಹುತೇಕ ಖಚಿತವಾಗಿದ್ದು, ಬಿಜೆಪಿಯಿಂದ ಟಿಕೆಟ್ ನೀಡಿದರೆ ಅವರ ವಿರುದ್ಧವೇ ಸ್ಪರ್ಧಿಸುವುದಾಗಿ ನಿರಾಣಿ ಸಹೋದರ ಹನುಮಂತ ನಿರಾಣಿ ಅವರು ಶನಿವಾರ ಹೇಳಿದ್ದಾರೆ.
ಹಾಲಿ ಜಿಲ್ಲಾ ಪಂಚಾಯತ್ ಸದಸ್ಯರಾಗಿರುವ ಹನುಮಂತ ನಿರಾಣಿ ಅವರು ಬೀಳಗಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ತಮಗೆ ಟಿಕೆಟ್ ನೀಡುವಂತೆ ಬಿಜೆಪಿ ರಾಜ್ಯಧ್ಯಾಕ್ಷ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ.
ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಹನುಮಂತ ನಿರಾಣಿ, ಕಳೆದ 15 ವರ್ಷಗಳಿಂದ ನಾನು ಪಕ್ಷಕ್ಕಾಗಿ ದುಡಿದಿದ್ದೇನೆ. ಬೀಳಗಿಯಲ್ಲಿ ಮುರುಗೇಶ್ ನಿರಾಣಿ ಅವರ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಹೀಗಾಗಿ ತಮ್ಮ ಸ್ವಕ್ಷೇತ್ರ ಬೀಳಗಿಯಿಂದಲೇ ತಾವು ಸ್ಪರ್ಧಿಸುವುದಾಗಿ ಹೇಳಿದರು.