ವಿಧಾನಸಭೆ ಚುನಾವಣೆಗೆ ಬಿಜೆಪಿ ಸಿದ್ಧ: ಸಿ.ಟಿ.ರವಿ
ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ ಸಿದ್ಧವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ.ರವಿ ಅವರು ಶನಿವಾರ ಹೇಳಿದ್ದಾರೆ.
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ ಸಿದ್ಧವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ.ರವಿ ಅವರು ಶನಿವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರವಿ, ಚುನಾವಣೆಗೆ ಬಿಜೆಪಿ ಕಾರ್ಯಕರ್ತರು ಮಾನಸಿಕವಾಗಿ ಸಿದ್ಧರಾಗಿದ್ದು, ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಯಶಸ್ವಿಯಾಗಿದೆ ಎಂದು ಹೇಳಿದರು.
ಏಪ್ರಿಲ್ ಮೊದಲ ವಾರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. ಅಲ್ಲದೆ ಏಪ್ರಿಲ್ 8ರಂದು ಬೆಂಗಳೂರಿನಲ್ಲಿ ವಿಜಯ ಸಂಕಲ್ಪ ಯಾತ್ರೆ ಆಯೋಜಿಸಲಾಗಿದ್ದು, ಅಂದು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್, ರಾಷ್ಟ್ರೀಯ ನಾಯಕರಾದ ಎಲ್.ಕೆ.ಅಡ್ವಾಣಿ, ಸುಷ್ಮಾ ಸ್ವರಾಜ್ ಹಾಗೂ ಅರುಣ್ ಜೇಟ್ಲಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.