ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಾಂಗ್ರೆಸ್‌ನಿಂದ 7 ಮಹಿಳೆಯರಿಗೆ ಟಿಕೆಟ್ ಖಾಯಂ

ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯ ಬಿಸಿ ತಟ್ಟುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್, ರಾಜ್ಯದ 7 ಮಹಿಳಾ..

Lingaraj Badiger
Updated On : 31 Mar 2013, 6:16 am

ನವದೆಹಲಿ: ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯ ಬಿಸಿ ತಟ್ಟುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್, ರಾಜ್ಯದ 7 ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಮುಂದಾಗಿದೆ.

ಬೆಂಗಳೂರಿನ ರಾಜಾಜಿನಗರದಿಂದ ಮಂಜುಳಾ ನಾಯ್ಡು, ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಿಂದ ಲಕ್ಷ್ಮಿ ಹೆಬ್ಬಾಳಕರ್, ಮಂಗಳೂರು ಉತ್ತರದಿಂದ ಕೃಪಾ ಆಳ್ವಾ, ಮದ್ದೂರಿನಿಂದ ಕಲ್ಪನಾ ಸಿದ್ದರಾಜು, ತೇರದಾಳದಿಂದ ಉಮಾಶ್ರೀ ಹಾಗೂ ಶಿರಹಟ್ಟಿಯಿಂದ ಸುಜಾತಾ ದೊಡ್ಡಮನಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ.

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಶೇ.10ರಷ್ಟು ಟಿಕೆಟ್‌ಗಳನ್ನು ಮಹಿಳೆಯರಿಗೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಇಂದು ಬೆಳಗ್ಗೆಯಿಂದ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸದೆದುರು ಪ್ರತಿಭಟನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement